ಕಾಂಗ್ರೆಸ್ ಪುನಶ್ಚೇತನಕ್ಕಾಗಿ ಪ್ರಿಯಾಂಕರನ್ನು ಕರೆತನ್ನಿ: ರಾಹುಲ್ ಗಾಂಧಿಗೆ ಅಮೇಥಿ ಜನರ ಆಗ್ರಹ

ಕಾಂಗ್ರೆಸ್ ಅನ್ನು ಪುನಶ್ಚೇತನಗೊಳಿಸಲು ಪ್ರಿಯಾಂಕಾ ಗಾಂಧಿಯನ್ನು ಸಕ್ರಿಯ ರಾಜಕಾರಣಕ್ಕೆ ಕರೆ ತನ್ನಿ ಎಂದು ಅಮೇಥಿ ಜನತೆ ಎಐಸಿಸಿ ಉಪಾಧ್ಯಕ್ಷ ರಾಹುಲ್..
ಪ್ರಿಯಾಂಕಾ ಗಾಂಧಿ ಮತ್ತು ರಾಹುಲ್ ಗಾಂಧಿ
ಪ್ರಿಯಾಂಕಾ ಗಾಂಧಿ ಮತ್ತು ರಾಹುಲ್ ಗಾಂಧಿ
Updated on: 

ಅಮೇಥಿ: ನಶಿಸುತ್ತಿರುವ ಕಾಂಗ್ರೆಸ್ ಅನ್ನು ಪುನಶ್ಚೇತನಗೊಳಿಸಲು ಪ್ರಿಯಾಂಕಾ ಗಾಂಧಿಯನ್ನು ಸಕ್ರಿಯ ರಾಜಕಾರಣಕ್ಕೆ ಕರೆ ತನ್ನಿ ಎಂದು ಅಮೇಥಿ ಜನತೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಗೆ ಹೇಳಿದ್ದಾರೆ.

ರಾಹುಲ್ ಗಾಂಧಿ ತಮ್ಮ ಸ್ವಕ್ಷೇತ್ರ ಅಮೇಥಿಯಲ್ಲಿ ಹಮ್ಮಿಕೊಂಡಿದ್ದ ಜನತಾ ದರ್ಬಾರ್ ಕಾರ್ಯಕ್ರಮದಲ್ಲಿ  ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿಯನ್ನು ಸಕ್ರಿಯ ರಾಜಕಾರಣಕ್ಕೆ ಕರೆ ತರುವಂತೆ ಆಗ್ರಹಿಸಿದ್ದಾರೆ ಎಂದು ಆಂಗ್ಲ ಪತ್ರಿಕೆಯೊಂದು ವರದಿ ಮಾಡಿದೆ.

2017 ರ ಉತ್ತರ ಪ್ರದೇಶ ವಿಧಾನ ಸಭೆ ಚುನಾವಣೆ ವೇಳೆಗೆ ಪ್ರಿಯಾಂಕಾರನ್ನು ರಾಜಕೀಯಕ್ಕೆ ಕರೆ ತಂದರೆ ಕಾಗ್ರೆಸ್ ಗೆ ಹೆಚ್ಚಿನ ಸಹಾಯವಾಗುತ್ತದೆ ಎಂದು ಅಮೇಥಿ ಜನ ಹೇಳಿದ್ದಾರೆ.

ಜನರ ಸಲಹೆಗಳನ್ನು ತಾಳ್ಮೆಯಿಂದ ಕೇಳಿದ ರಾಹುಲ್ ಗಾಂಧಿ ಅಮೇಥಿಯ ಹಲವು ಗ್ರಾಮಗಳಿಗೆ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆ ಆಲಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com