ಶಿವಸೇನೆ ನಾಯಕ ಉದ್ಧವ್ ಠಾಕ್ರೆ
ಶಿವಸೇನೆ ನಾಯಕ ಉದ್ಧವ್ ಠಾಕ್ರೆ

ಉತ್ತರಾಖಂಡ್ ನಲ್ಲಿ ರಾಷ್ಟ್ರಪತಿ ಆಳ್ವಿಕೆ ಹಿಂದೆ ಕೇಂದ್ರದ ರಾಜಕೀಯ ಸ್ವಾರ್ಥ, ರಾಷ್ಟ್ರಪತಿ ಘನತೆಗೂ ಧಕ್ಕೆ: ಶಿವಸೇನೆ

ಉತ್ತರಾಖಂಡ್ ನಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿದ್ದನ್ನು ವಿರೋಧಿಸಿರುವ ಬಿಜೆಪಿ ಮಿತ್ರ ಪಕ್ಷ ಶಿವಸೇನೆ, ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನಗೊಂಡಿದೆ.

ಮುಂಬೈ: ಉತ್ತರಾಖಂಡ್ ನಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿದ್ದನ್ನು ವಿರೋಧಿಸಿರುವ ಬಿಜೆಪಿ ಮಿತ್ರ ಪಕ್ಷ ಶಿವಸೇನೆ, ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನಗೊಂಡಿದೆ.
ರಾಷ್ಟ್ರಪತಿ ಆಳ್ವಿಕೆ ಬಗ್ಗೆ ಉತ್ತರಾಖಂಡ್ ಹೈಕೋರ್ಟ್ ನೀಡಿರುವ ತೀರ್ಪು ಕೇಂದ್ರ ಸರ್ಕಾರ ರಾಜಕೀಯ ಸ್ವಾರ್ಥದಿಂದ ಕ್ರಮ ಕೈಗೊಂಡಿತ್ತು ಎಂಬುದನ್ನು ಸ್ಪಷ್ಟಪಡಿಸುತ್ತದೆ, ಅಷ್ಟೇ ಅಲ್ಲದೇ ಹೈಕೋರ್ಟ್ ನೀಡಿರುವ ತೀರ್ಪಿನಿಂದ ರಾಷ್ಟ್ರಪತಿ ಸ್ಥಾನದ ವರ್ಚಸ್ಸಿಗೂ ಧಕ್ಕೆ ಉಂಟಾಗಿದೆ ಎಂದು ಶಿವಸೇನೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. 
ಉತ್ತರಾಖಂಡ್ ನಲ್ಲಿ ರಾಷ್ಟ್ರಪತಿ ಆಳ್ವಿಕೆ ಬಗ್ಗೆ ಮುಖವಾಣಿ ಸಾಮ್ನಾದಲ್ಲಿ ಬರೆದಿರುವ ಸಂಪಾದಕೀಯದಲ್ಲಿ " ಉತ್ತರಾಖಂಡ್ ಹೈಕೋರ್ಟ್ ನೀಡಿರುವ ತೀರ್ಪಿನಿಂದ ಕೇಂದ್ರ ಸರ್ಕಾರ ರಾಜಕೀಯ ಸ್ವಾರ್ಥದಿಂದ ಈ ಕ್ರಮ ಕೈಗೊಂಡಿದೆ ಎಂಬುದು ಮಾತ್ರ ಸಾಬೀತಾಗಿಲ್ಲ, ಅದರೊಂದಿಗೆ ರಾಷ್ಟ್ರಪತಿ ಸ್ಥಾನದ ಘನತೆಗೂ ಧಕ್ಕೆ ಉಂಟಾಗಿದೆ ಎಂದು ಹೇಳಿದೆ.

Related Stories

No stories found.

Advertisement

X
Kannada Prabha
www.kannadaprabha.com