ರಾಜ್ಯಸಭೆಯಲ್ಲಿ ಉತ್ತರಾಖಂಡ್ ಬಿಕ್ಕಟ್ಟಿನ ಚರ್ಚೆ ಹಾಗೂ ಖಂಡನಾ ನಿರ್ಣಯಕ್ಕೆ ಕಾಂಗ್ರೆಸ್ ನೋಟಿಸ್

ರಾಜ್ಯಸಭೆಯಲ್ಲಿ ಪ್ರಶ್ನೋತ್ತರ ಅವಧಿಯನ್ನು ಅಮಾನತುಗೊಳಿಸಿ ಉತ್ತರಾಖಂಡ್ ರಾಜಕೀಯ ಬಿಕ್ಕಟ್ಟಿನ ಬಗ್ಗೆ ಚರ್ಚೆ ನಡೆಸಬೇಕು...
ಗುಲಾಂ ನಬಿ ಆಜಾದ್
ಗುಲಾಂ ನಬಿ ಆಜಾದ್
Updated on: 
ನವದೆಹಲಿ: ರಾಜ್ಯಸಭೆಯಲ್ಲಿ ಪ್ರಶ್ನೋತ್ತರ ಅವಧಿಯನ್ನು ಅಮಾನತುಗೊಳಿಸಿ ಉತ್ತರಾಖಂಡ್ ರಾಜಕೀಯ ಬಿಕ್ಕಟ್ಟಿನ ಬಗ್ಗೆ ಚರ್ಚೆ ನಡೆಸಬೇಕು ಮತು ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರಿದ್ದನ್ನು ಖಂಡಿಸುವ ನಿರ್ಣಯ ಅಂಗೀಕರಿಸಬೇಕು ಎಂದು ಕೋರಿ ಕಾಂಗ್ರೆಸ್ ನೋಟಿಸ್​ನೀಡಿದೆ.
ಉತ್ತರಾಖಂಡ್ ದಲ್ಲಿ ಪ್ರಜಾತಾಂತ್ರಿಕವಾಗಿ ಚುನಾಯಿತವಾದ ಸರ್ಕಾರವನ್ನು ಅಸ್ಥಿರಗೊಳಿಸಲಾಗುತ್ತಿದೆ ಎಂದು ಆರೋಪಿಸಿರುವ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್ ಮತ್ತು ಸದನದಲ್ಲಿ ಕಾಂಗ್ರೆಸ್ ಪಕ್ಷದ ಉಪ ನಾಯಕ ಆನಂದ ಶರ್ಮಾ ಅವರು, ನಿರ್ಣಯದ ಮೂಲಕ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಉದ್ದೇಶಿಸಿದ್ದಾರೆ.
ನಿಯಮ 267ರ ಅಡಿಯಲ್ಲಿ ನೀಡಲಾದ ತಮ್ಮ ನೋಟಿಸ್​ನಲ್ಲಿ ಶರ್ಮಾ ಅವರು ಉತ್ತರಾಖಂಡ್ ಸರ್ಕಾರವನ್ನು ಅಸ್ಥಿರಗೊಳಿಸಿದ್ದಕ್ಕಾಗಿ ಮತ್ತು ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಿದ್ದಕ್ಕಾಗಿ ಕೇಂದ್ರದ ಮೋದಿ ಸರ್ಕಾರವನ್ನು ಖಂಡಿಸುವ ನಿರ್ಣಯವನ್ನು ಅಂಗೀಕರಿಸುವಂತೆಯೂ ಸಭಾಪತಿ ಹಮೀದ್ ಅನ್ಸಾರಿ ಅವರನ್ನು ಕೋರಿದ್ದಾರೆ.
‘ಉತ್ತರಾಖಂಡ್ ದಲ್ಲಿನ ಪ್ರಜಾತಾಂತ್ರಿಕವಾಗಿ ಚುನಾಯಿತವಾದ ಸರ್ಕಾರವನ್ನು ಅಸ್ಥಿರಗೊಳಿಸಿದ್ದನ್ನು ಈ ಸದನವು ಖಂಡಿಸುತ್ತದೆ ಮತ್ತು ಸಂವಿಧಾನದ 356ನೇ ವಿಧಿಯ ಅಡಿಯಲ್ಲಿ ಅಸಮರ್ಥನೀಯ ರೀತಿಯಲ್ಲಿ ಅಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿದ್ದನ್ನು ತಿರಸ್ಕರಿಸುತ್ತದೆ’ ಎಂದು ಸಭಾಪತಿಯವರಿಗೆ ಸಲ್ಲಿಸಲಾದ ನಿರ್ಣಯ ಹೇಳುತ್ತದೆ.
ನಿನ್ನೆಯಷ್ಟೇ ರಾಷ್ಚ್ರಪತಿ ಆಡಳಿತ ವಜಾಗೊಳಿಸಿದ್ದ ಉತ್ತರಾಖಂಡ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ರಾಜ್ಯದಲ್ಲಿ ಮತ್ತೆ ರಾಷ್ಟ್ರುಪತಿ ಆಡಳಿತ ಜಾರಿಗೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com