ಅಲಿಗಢ: ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆಯಾಗಿದ್ದು, ಪರಿಣಾಮ ಓರ್ವ ವಿದ್ಯಾರ್ಥಿ ಸಾವನ್ನಪ್ಪಿ ಮತ್ತೋರ್ವ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ಸಂಜೆ ನಡೆದಿದೆ.
ನಿನ್ನೆ ಸಂಜೆ ಅದಾವ ಕಾರಣಕ್ಕೋ ಏನೋ ವಿಶ್ವವಿದ್ಯಾಲಯದ ಎರಡು ಗುಂಪುಗಳ ನಡುವೆ ಇದ್ದಕ್ಕಿದ್ದಂತೆ ಘರ್ಷಣೆ ಏರ್ಪಟ್ಟಿದೆ ಈ ವೇಳೆ ವಿದ್ಯಾರ್ಥಿಗಳ ಹೊಡೆದಾಟಕ್ಕಿಳಿದಿದ್ದಾರೆ. ಇದರಂತೆ ಮಧ್ಯೆ ಪ್ರವೇಶ ಮಾಡಿರುವ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಈ ವೇಳೆ ವಿದ್ಯಾರ್ಥಿಯೊಬ್ಬನಿಗೆ ಗುಂಡು ತಗುಲಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆಂದು ತಿಳಿದುಬಂದಿದೆ.
ಇನ್ನು ವಿದ್ಯಾರ್ಥಿ ಸಾವನ್ನಪ್ಪುತ್ತಿದ್ದಂತೆ ರೊಚ್ಚಿಗೆದ್ದಿರುವ ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ಶಿಸ್ತುಪಾಲನಾಧಿಕಾರಿ ಕಚೇರಿ ಹಾಗೂ ಎರಡು ವಾಹನಗಳಿಗೆ ಬೆಂಕಿ ಹಚ್ಚುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಸ್ತುತ ವಿವಿಯ ಆವರಣದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ ಎಂದು ತಿಳಿದುಬಂದಿದೆ.
Advertisement