
ನವದೆಹಲಿ: ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಲ್ಲಿರುವ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಕೇಸರಿ ಭಯೋತ್ಪಾದನೆ ಎಂಬ ಪದ ಬಳಕೆ ಮೂಲಕ ಕಾಂಗ್ರೆಸ್ ಪಕ್ಷ ಹಿಂದೂಗಳಿಗೆ ಅವಮಾನ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ವಸುದೈವ ಕುಟುಂಬಕಂ ಎಂಬ ತತ್ವವನ್ನು ನಂಬಿರುವ 'ಕೇಸರಿ'ಯ ಅನುಯಾಯಿಗಳು ಭಯೋತ್ಪಾದನೆಯನ್ನು ಎಂದಿಗೂ ಬೆಂಬಲಿಸುವುದಿಲ್ಲ, ಇರುವೆಗಳಿಗೆ ಆಹಾರ ನೀಡುವವರು, ಗಿಡಮರಗಳಿಗೆ ನೀರುಣಿಸುವವರು, ಹಾವಿಗೆ ಹಾಲೆರೆಯುವವರು ಭಯೋತ್ಪಾದನೆಯನ್ನು ಬೆಂಬಲಿಸಲು ಹೇಗೆ ಸಾಧ್ಯ ಎಂದು ಗಿರಿರಾಜ್ ಸಿಂಗ್ ಪ್ರಶ್ನಿಸಿದ್ದಾರೆ.
ಕೇಸರಿ ಭಯೋತ್ಪಾದನೆ ಎಂಬುದು ಹಿಂದೂಗಳಿಗೆ ಅವಮಾನ ಮಾಡಲು ಓಟಿಗಾಗಿ ಕಾಂಗ್ರೆಸ್ ರೂಪಿಸಿರುವ ಅಜೆಂಡಾ ಎಂದು ಗ್ರಿರಾಜ್ ಸಿಂಗ್ ಆರೋಪಿಸಿದ್ದಾರೆ.
Advertisement