ವೆಂಕಯ್ಯ ನಾಯ್ಡು
ವೆಂಕಯ್ಯ ನಾಯ್ಡು

ಸಂಸತ್ತಿನಲ್ಲಿ ಯಾವುದೇ ವಿಷಯದ ಕುರಿತು ಚರ್ಚೆಗೆ ಸರ್ಕಾರ ಸಿದ್ಧವಿದೆ: ನಾಯ್ಡು

ಇಂದಿನಿಂದ ಆರಂಭವಾಗಿರುವ ಸಂಸತ್ತಿನ ಬಜೆಟ್‌ ಅಧಿವೇಶನದ 2ನೇ ಹಾಗೂ ಕೊನೆಯ ಚರಣದ ಕಲಾಪಕ್ಕೆ ಪ್ರತಿಪಕ್ಷಗಳು ಅಡ್ಡಿಪಡಿಸುವುದಿಲ್ಲ ಎಂಬ ವಿಶ್ವಾಸ...
ನವದೆಹಲಿ: ಇಂದಿನಿಂದ ಆರಂಭವಾಗಿರುವ ಸಂಸತ್ತಿನ ಬಜೆಟ್‌ ಅಧಿವೇಶನದ 2ನೇ ಹಾಗೂ ಕೊನೆಯ ಚರಣದ ಕಲಾಪಕ್ಕೆ ಪ್ರತಿಪಕ್ಷಗಳು ಅಡ್ಡಿಪಡಿಸುವುದಿಲ್ಲ ಎಂಬ ವಿಶ್ವಾಸ ವ್ಯಕ್ತಪಡಿಸಿರುವ ಸಂಸದೀಯ ವ್ಯವಹಾರಗಳ ಸಚಿವ ಎಂ.ವೆಂಕಯ್ಯ ನಾಯ್ಡು ಅವರು, ಸದನದಲ್ಲಿ ಯಾವುದೇ ವಿಷಯದ ಕುರಿತು ಚರ್ಚೆಗೆ ಸರ್ಕಾರ ಸಿದ್ಧವಿದೆ ಎಂದಿದ್ದಾರೆ.
'ಈ ಬಾರಿಯ ಕಲಾಪ ವರ್ಥವಾಗುವುದಿಲ್ಲ ಅಂತ ನಾನು ಭಾವಿಸಿದ್ದೇನೆ. ಏಕೆಂದರು ಇಂದು ಬಜೆಟ್ ಅಧಿವೇಶನದ ಎರಡನೇ ಭಾಗ. ಹಣಕಾಸಿನ ಕುರಿತು ಚರ್ಚೆಯಾಗಬೇಕಿದೆ' ಎಂದು ನಾಯ್ಡು ತಿಳಿಸಿದ್ದಾರೆ.
ಸಂಸತ್ತಿನಲ್ಲಿ ಯಾವುದೇ ವಿಷಯವನ್ನು ಚರ್ಚೆಗೆ ಎತ್ತಿಕೊಳ್ಳಲು ಕಾನೂನು ಮತ್ತು ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಇದನ್ನು ಪ್ರತಿಪಕ್ಷದವರು ಅರಿತುಕೊಳ್ಳಬೇಕು ಎಂದು ನಾಯ್ಡು ಹೇಳಿದ್ದಾರೆ.
ಈ ಅಧಿವೇಶನದಲ್ಲಿ ಸರ್ಕಾರ ಮಹತ್ವದ ಜಿಎಸ್‌ಟಿ ಸೇರಿದಂತೆ 13 ಮಸೂದೆಗಳನ್ನು ಲೋಕಸಭೆಯಲ್ಲಿ ಮತ್ತು 11 ಮಸೂದೆಗಳನ್ನು ರಾಜ್ಯಸಭೆಯಲ್ಲಿ ಅಂಗೀಕರಿಸಿಕೊಳ್ಳುವ ಉದ್ದೇಶ ಹೊಂದಿದೆ. ಆದರೆ, ಕಾಂಗ್ರೆಸ್‌, ಜೆಡಿಯು ಮತ್ತು ಎಡರಂಗ ಸೇರಿದಂತೆ ಪ್ರಮುಖ ವಿಪಕ್ಷಗಳು ಉತ್ತರಾಖಂಡದಲ್ಲಿ ಕಾಂಗ್ರೆಸ್‌ ಸರಕಾರವನ್ನು ಉದ್ದೇಶಪೂರ್ವಕವಾಗಿ ವಜಾಗೊಳಿಸಲಾಗಿದ್ದು, ಈ ಬಗ್ಗೆ ಚರ್ಚೆ ನಡೆಯಬೇಕು ಎಂದು ಆಗ್ರಹಿಸಿ ಮೊದಲ ದಿನದಿಂದಲೇ ಗದ್ದಲ ಎಬ್ಬಿಸಿವೆ.

Related Stories

No stories found.

Advertisement

X
Kannada Prabha
www.kannadaprabha.com