ಸುಷ್ಮಾ ಸ್ವರಾಜ್ ಆರೋಗ್ಯ ಸ್ಥಿರ

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಆರೋಗ್ಯ ಸ್ಥಿರವಾಗಿದೆ ಎಂದು ಅಖಿಲ ಭಾರತ ವೈದ್ಯಕೀಯ...
ಸುಷ್ಮಾ ಸ್ವರಾಜ್
ಸುಷ್ಮಾ ಸ್ವರಾಜ್
Updated on: 

ನವದೆಹಲಿ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಆರೋಗ್ಯ ಸ್ಥಿರವಾಗಿದೆ ಎಂದು ಅಖಿಲ ಭಾರತ ವೈದ್ಯಕೀಯ ವಿಜ್ಞಾನ(ಏಮ್ಸ್) ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

64 ವರ್ಷದ ಸುಷ್ಮಾ ಅವರು ಜ್ವರ ಮತ್ತು ಎದೆ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು ಅವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿರವಾಗಿದ್ದು ಆತಂಕ ಪಡುವ ಅಗತ್ಯವಿಲ್ಲ ಎಂದು ವೈದ್ಯರು ಹೇಳಿದ್ದಾರೆ.

ಆಸ್ಪತ್ರೆಯ ನುರಿತ ವೈದ್ಯರು ಸುಷ್ಮಾರಿಗೆ ಚಿಕಿತ್ಸೆ ನೀಡಿದ್ದು ಅವರ ಆರೋಗ್ಯ ಸುಧಾರಿಸಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಇದೇ ಮೊದಲ ಬಾರಿಗೆ ಭಾರತ ಹಾರ್ಟ್‌ ಆಫ್ ಏಷ್ಯಾದ ಹಿರಿಯ ಅಧಿಕಾರಿಗಳ ಸಭೆ ನಡೆಸುತ್ತಿದೆ. ಪಾಕಿಸ್ತಾನ ವಿದೇಶಾಂಗ ಕಾರ್ಯದರ್ಶಿ ಇಜಾಜ್ ಅಹಮದ್ ಚೌಧರಿ ಸಭೆಯಲ್ಲಿ ಭಾಗಿವಹಿಸಲು ಆಗಮಿಸಿದ್ದು ಅವರನ್ನು ಸುಷ್ಮಾ ಸ್ವರಾಜ್ ಭೇಟಿಯಾಗಿ ಮಾತುಕತೆ ನಡೆಸಬೇಕಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com