ಭಾರತ-ಪಾಕ್ ವಿದೇಶಾಂಗ ಕಾರ್ಯದರ್ಶಿಗಳ ಸಭೆ ಮುಕ್ತಾಯ

'ಹಾರ್ಟ್ ಆಫ್ ಏಷ್ಯಾ' ಶೃಂಗದಲ್ಲಿ ಪಾಲ್ಗೊಳ್ಳುವ ಸಲುವಾಗಿ ಭಾರತಕ್ಕೆ ಭೇಟಿ ನೀಡಿರುವ ಪಾಕಿಸ್ತಾನ ವಿದೇಶಾಂಗ ಕಾರ್ಯದರ್ಶಿ ಐಜಾಜ್ ಅಹಮ್ಮದ್ ಚೌಧರಿ ಅವರು...
ದೆಹಲಿಯಲ್ಲಿ ಜೈಶಂಕರ್'ನ್ನು ಭೇಟಿಯಾದ ಪಾಕ್ ವಿದೇಶಾಂಗ ಕಾರ್ಯದರ್ಶಿ ಐಜಾಜ್ ಚೌಧರಿ
ದೆಹಲಿಯಲ್ಲಿ ಜೈಶಂಕರ್'ನ್ನು ಭೇಟಿಯಾದ ಪಾಕ್ ವಿದೇಶಾಂಗ ಕಾರ್ಯದರ್ಶಿ ಐಜಾಜ್ ಚೌಧರಿ

ನವದೆಹಲಿ: 'ಹಾರ್ಟ್ ಆಫ್ ಏಷ್ಯಾ' ಶೃಂಗದಲ್ಲಿ ಪಾಲ್ಗೊಳ್ಳುವ ಸಲುವಾಗಿ ಭಾರತಕ್ಕೆ ಭೇಟಿ ನೀಡಿರುವ ಪಾಕಿಸ್ತಾನ ವಿದೇಶಾಂಗ ಕಾರ್ಯದರ್ಶಿ ಐಜಾಜ್ ಅಹಮ್ಮದ್ ಚೌಧರಿ ಅವರು ಮಂಗಳವಾರ ಬೆಳಿಗ್ಗೆ ರಾಜಧಾನಿ ದೆಹಲಿಯಲ್ಲಿ ಭಾರತದ ವಿದೇಶಾಂಗ ಕಾರ್ಯದರ್ಶಿ ಎಸ್. ಜೈಶಂಕರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಭೇಟಿ ವೇಳೆ ಉಭಯ ದೇಶಗಳ ಕಾರ್ಯದರ್ಶಿಗಳು ಕಾರ್ಯದರ್ಶಿಗಳ ಮಟ್ಟದ ದ್ವಿಪಕ್ಷೀಯ ಮಾತುಕತೆಯನ್ನು ನಡೆಸಿದ್ದು, ಈ ಸಂದರ್ಭ ಜಮ್ಮು ಮತ್ತು ಕಾಶ್ಮೀರ ಗಡಿ ವಿವಾದ, ಪಠಾಣ್ ಕೋಟ್ ವಾಯುನೆಲೆ ಮೇಲಿನ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆಂದು ತಿಳಿದುಬಂದಿದೆ.

ಉಭಯ ದೇಶಗಳ ಕಾರ್ಯದರ್ಶಿಗಳ ಮಾತುಕತೆ ಮುಗಿಯುತ್ತಿದ್ದಂತೆಯೇ ಪಾಕಿಸ್ತಾನ ವಿದೇಶಾಂಗ ಸಚಿವಾಲಯ ಪ್ರತಿಕ್ರಿಯೆ ನೀಡಿದ್ದು, ಜಮ್ಮು ಕಾಶ್ಮೀರ ಗಡಿ ವಿವಾದ, ಪಠಾಣ್ ಕೋಟ್ ಉಗ್ರರ ದಾಳಿ ಸೇರಿ ಇನ್ನು ಅನೇಕ ವಿಚಾರಗಳ ಬಗ್ಗೆ ಅಧಿಕಾರಿಗಳು ಮಾತುಕತೆ ನಡೆಸಿದ್ದಾರೆ.

ಉಭಯ ರಾಷ್ಟ್ರಗಳ ನಡುವಿನ ಸಂಬಂಧವನ್ನು ವೃದ್ಧಿಗೊಳಿಸುವ ನಿಟ್ಟಿನಲ್ಲಿ ಈ ಮಾತುಕತೆ ನಡೆಸಲಾಗಿದ್ದು. ಮಾತುಕತೆ ಫಲಪ್ರದವಾಗಿದೆ. ನಮ್ಮ ಪ್ರಧಾನಿಯವರ ಕನಸು ಕೂಡ ಶಾಂತಿ ಕಾಪಾಡಿಕೊಂಡು ನೆರೆ ರಾಷ್ಟ್ರಗಳ ಜತೆಗಿನ ಸಂಬಂಧ ವೃದ್ಧಿಸಿಗೊಳ್ಳಿಸುವುದೇ ಆಗಿದೆ ಎಂದು ಹೇಳಿಕೊಂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com