ರಾಜ್ಯಸಭೆಗೆ ಸುಬ್ರಹ್ಮಣಿಯನ್ ಸ್ವಾಮಿ ಆಯ್ಕೆಯನ್ನು ನಿರ್ಧರಿಸಿದ ಇಬ್ಬರು ಬಿಜೆಪಿ ನಾಯಕರು ಯಾರು ಗೊತ್ತಾ?

ರಾಜ್ಯಸಭಾ ಸದಸ್ಯ ಸುಬ್ರಹ್ಮಣಿಯನ್ ಸ್ವಾಮಿ ಅವರ ಆಯ್ಕೆಯನ್ನು ನಿರ್ಧರಿಸಿದ್ದು ಬಿಜೆಪಿಯ ಇಬ್ಬರೇ ನಾಯಕರು!
ಸುಬ್ರಹ್ಮಣಿಯನ್ ಸ್ವಾಮಿ
ಸುಬ್ರಹ್ಮಣಿಯನ್ ಸ್ವಾಮಿ

ನವದೆಹಲಿ: ಬಿಜೆಪಿ ನಾಯಕ ಸುಬ್ರಹ್ಮಣಿಯನ್ ಸ್ವಾಮಿ ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಕಲಾಪದಲ್ಲಿ ಭಾಗಿಯಾಗಿದ್ದಾರೆ. ಆದರೆ ಅವರ ಆಯ್ಕೆಯನ್ನು ನಿರ್ಧರಿಸಿದ್ದು ಬಿಜೆಪಿಯ ಇಬ್ಬರೇ ನಾಯಕರು!
ಹೌದು ರಾಜ್ಯಸಭೆಗೆ ನಾಮ ನಿರ್ದೇಶನ ಮಾಡುವುದಕ್ಕೂ ಮುನ್ನ ಪಕ್ಷದ ನಾಯಕರ ಅಭಿಪ್ರಾಯ ಸಂಗ್ರಹಣೆ ಮಾಡಿ ನಂತರ ಅಂತಿಮಗೊಳಿಸಲಾಗುತ್ತದೆ. ಆದರೆ ಸುಬ್ರಹ್ಮಣಿಯನ್ ಸ್ವಾಮಿ ಅವರ ಆಯ್ಕೆ ಸಂದರ್ಭದಲ್ಲಿ ಬೇರೆ ಯಾವುದೇ ಬಿಜೆಪಿ ನಾಯಕರ ಅಭಿಪ್ರಾಯ ಪಡೆಯದೇ ಹೆಸರನ್ನು ಅಂತಿಮಗೊಳಿಸಲಾಗಿದ್ದು ಈ ನಿರ್ಧಾರವನ್ನು ಪ್ರಧಾನಿ ಮೋದಿ ಹಾಗು ಅಮಿತ್ ಶಾ ಕೈಗೊಂಡಿದ್ದಾರೆ ಎನ್ನಲಾಗಿದೆ.    
ಸುಬ್ರಹ್ಮಣಿಯನ್ ಸ್ವಾಮಿ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಲು ಆರ್ ಎಸ್ ಎಸ್ ಮುಖಂಡ ಮೋಹನ್ ಭಾಗವತ್ ಅವರ ಬೆಂಬಲವೂ ಇತ್ತು ಎಂದು ಹೇಳಲಾಗಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸುಬ್ರಹ್ಮಣಿಯನ್ ಸ್ವಾಮಿ ಪರಿಣಾಮಕಾರಿಯಾಗಿ ಕೆಲಸ ಮಾಡಿರುವುದನ್ನು ಪರಿಗಣಿಸಿ ರಾಜ್ಯಸಭೆಗೆ ಆಯ್ಕೆ ಮಾಡಲಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com