ಉ.ಖಂಡ: ಲೋಕತಂತ್ರ ಬಚಾವೋ ಆಂದೋಲನಕ್ಕೆ ಸೋನಿಯಾ ಸಾರಥ್ಯ

ಉತ್ತರಾಖಂಡ್ ನಲ್ಲಿ ಕೇಂದ್ರದ ಆಡಳಿತಾರೂಢ ಎನ್ ಡಿಎ ಸರ್ಕಾರದ ಅನಧಿಕೃತ ನಡೆಯನ್ನು ವಿರೋಧಿಸಿರುವ ಕಾಂಗ್ರೆಸ್ ಪಕ್ಷ ಇದೀಗ ಕಾಂಗ್ರೆಸ್ ಉಪಾಧ್ಯಕ್ಷೆ ಸೋನಿಯಾಗಾಂಧಿಯವರ...
ಕಾಂಗ್ರೆಸ್ ಉಪಾಧ್ಯಕ್ಷೆ ಸೋನಿಯಾ ಗಾಂಧಿ
ಕಾಂಗ್ರೆಸ್ ಉಪಾಧ್ಯಕ್ಷೆ ಸೋನಿಯಾ ಗಾಂಧಿ
Updated on: 

ನವದೆಹಲಿ: ಉತ್ತರಾಖಂಡ್ ನಲ್ಲಿ ಕೇಂದ್ರದ ಆಡಳಿತಾರೂಢ ಎನ್ ಡಿಎ ಸರ್ಕಾರದ ಅನಧಿಕೃತ ನಡೆಯನ್ನು ವಿರೋಧಿಸಿರುವ ಕಾಂಗ್ರೆಸ್ ಪಕ್ಷ ಇದೀಗ ಕಾಂಗ್ರೆಸ್ ಉಪಾಧ್ಯಕ್ಷೆ ಸೋನಿಯಾಗಾಂಧಿಯವರ ಸಾರಥ್ಯದಲ್ಲಿ ಲೋಕತಂತ್ರ ಬಚಾವೋ ಆಂದೋಲನ ನಡೆಸಲು ಗುರುವಾರ ತೀರ್ಮಾನಿಸಿದೆ.

ಉತ್ತರಾಖಂಡ್ ನಲ್ಲಿ ಹೇರಲಾಗಿರುವ ರಾಷ್ಟ್ರಪತಿ ಆಡಳಿತ ಹಾಗೂ ರಾಜಕೀಯ ಬಿಕ್ಕಟ್ಟು ಬೆಳವಣಿಗೆಗಳನ್ನು ವಿರೋಧಿಸಿರುವ ಕಾಂಗ್ರೆಸ್ ಮೇ.6 ರಂದು ಸೋನಿಯಾಗಾಂಧಿಯವರ ಸಾರಥ್ಯದಲ್ಲಿ ಲೋಕತಂತ್ರ ಬಚಾವೋ ಆಂದೋಲನ ನಡೆಸಲು ತೀರ್ಮಾನಿಸಿದೆ ಎಂದು ತಿಳಿದುಬಂದಿದೆ.

ರಾಷ್ಟ್ರಪತಿ ಆಡಳಿತ ಜಾರಿಯ ವಿಷಯದಲ್ಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ನಿನ್ನೆ ವಿಚಾರಣೆ ನಡೆಸಿದ್ದ ಸುಪ್ರೀಂ, ಕೇಂದ್ರ ಸರ್ಕಾರ ಜಾರಿಗೊಳಿಸಿರುವ ರಾಷ್ಟ್ರಪತಿ ಆಡಳಿತ ಮುಂದುವರೆಯಲಿದೆ ಎಂದು ಹೇಳಿತ್ತು. ಅಲ್ಲದೆ,ಏ.29 ಕ್ಕೆ ನಿಗದಿಯಾಗಿದ್ದ ಬಹುಮತ ಸಾಬೀತು ಪ್ರಕ್ರಿಯೆಗೆ ತಡೆ ನೀಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com