ಬ್ರಿಟನ್'ನಲ್ಲಿ ಮಲ್ಯ: ಗಡಿಪಾರು ಪ್ರಕ್ರಿಯೆ ಆರಂಭಿಸಿದ ಸರ್ಕಾರ

ಸಾಲದ ಸುಳಿಯಲ್ಲಿ ಸಿಲುಕಿ ಬ್ರಿಟನ್ ನಲ್ಲಿ ನೆಲೆಯೂರಿರುವ ವಿಜಯ್ ಮಲ್ಯ ಅವರ ಗಡಿಪಾರು ಪ್ರಕ್ರಿಯೆಯನ್ನು ಸರ್ಕಾರ ಆರಂಭಿಸಿರುವುದಾಗಿ ಗುರುವಾರ ತಿಳಿದುಬಂದಿದೆ...
ವಿಜಯ್ ಮಲ್ಯ
ವಿಜಯ್ ಮಲ್ಯ

ನವದೆಹಲಿ: ಸಾಲದ ಸುಳಿಯಲ್ಲಿ ಸಿಲುಕಿ ಬ್ರಿಟನ್ ನಲ್ಲಿ ನೆಲೆಯೂರಿರುವ ವಿಜಯ್ ಮಲ್ಯ ಅವರ ಗಡಿಪಾರು ಪ್ರಕ್ರಿಯೆಯನ್ನು ಸರ್ಕಾರ ಆರಂಭಿಸಿರುವುದಾಗಿ ಗುರುವಾರ ತಿಳಿದುಬಂದಿದೆ.

ಈ ಕುರಿತಂತೆ ಮಾತನಾಡಿರುವ ವಿದೇಶಾಂಗ ಸಚಿವಾಲಯ ವಕ್ತಾರ ವಿಕಾಸ್ ಸ್ವರೂಪ್ ಅವರು, ಮಲ್ಯ ಅವರ ಪಾಸ್ ಪೋರ್ಟ್ ನ್ನು ರದ್ದುಗೊಳಿಸಲಾಗಿದ್ದು, ಮಲ್ಯ ಅವರನ್ನು ಗಡಿಪಾರು ಮಾಡುವಂತೆ ಬ್ರಿಟನ್ ಉನ್ನತ ಆಯೋಗಕ್ಕೆ ಪತ್ರವನ್ನು ಬರೆಯಲಾಗಿದೆ. ಇನ್ನು ಗಡಿಪಾರು ಮಾಡುವ ಪ್ರಕ್ರಿಯೆಯನ್ನು ಸರ್ಕಾರ ಆರಂಭಿಸಿದೆ ಎಂದು ಹೇಳಿದ್ದಾರೆ.

ಈ ಹಿಂದಷ್ಟೇ ವಿಜಯ್ ಮಲ್ಯ ಗಡಿಪಾರು ಕುರಿತಂತೆ ವಿದೇಶಾಂಗ ಸಚಿವಾಲಯವು ಬ್ರಿಟನ್ ಉನ್ನತ ಆಯೋಗಕ್ಕೆ ಪತ್ರವೊಂದನ್ನು ಬರೆದಿತ್ತು. ವಿಜಯ್ ಮಲ್ಯ ಅವರು ಬ್ಯಾಂಕುಗಳಿಗೆ 9 ಸಾವಿರ ಕೋಟಿ ಹಣವನ್ನು ನೀಡಬೇಕಿದೆ. ಈ ಬಗ್ಗೆ ನ್ಯಾಯಾಲಯ ವಿಚಾರಣೆ ನಡೆಸುತ್ತಿದ್ದರೂ, ಈ ವರೆಗೂ ವಿಚಾರಣೆಗೆ ಹಾಜರಾಗಿಲ್ಲ. ಇನ್ನು ಮಲ್ಯ ಅವರ ಪಾಸ್ ಪೋರ್ಟ್ ನ್ನು ರದ್ದುಗೊಳಿಸಲಾಗಿದ್ದು, ಮಲ್ಯ ಅವರನ್ನು ಗಡಿಪಾರು ಮಾಡುವಂತೆ ಪತ್ರ ಬರೆಯುವ ಮನವಿಯನ್ನು ಮಾಡಿಕೊಂಡಿತ್ತು.

ಕಳೆದ ವಾರಗಳ ಹಿಂದಷ್ಟೇ ವಿದೇಶಾಂಗ ಸಚಿವಾಲಯ ರಾಜ್ಯಸಭಾ ಸದಸ್ಯರೂ ಆಗಿರುವ ವಿಜಯ್ ಮಲ್ಯ ಅವರ ರಾಜ ತಾಂತ್ರಿಕ ಪಾಸ್ ಪೋರ್ಟ್ ಅನ್ನು ಕೇಂದ್ರ ಸರ್ಕಾರ ಅಮಾನತುಗೊಳಿಸಿತ್ತು. ಐಡಿಬಿಐ ಬ್ಯಾಂಕ್ ನಿಂದ ಪಡೆದ 900 ಕೋಟಿ ರುಪಾಯಿ ಸಾಲವನ್ನು ದುರ್ಬಳಕೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಮುಂದೆ ವಿಜಯ್ ಮಲ್ಯ ವಿಚಾರಣೆಗೆ ಹಾಜರಾಗಬೇಕಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com