
ನವದೆಹಲಿ: ಅಗಸ್ಟಾ ವೆಸ್ಟ್ ಲ್ಯಾಂಡ್ ಹೆಲಿಕಾಫ್ಟರ್ ಹಗರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಮೌನವನ್ನು ಪ್ರಶ್ನಿಸಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತಂಡ ಕಾಂಗ್ರೆಸ್ ನ ನಾಯಕರ ಮೇಲೆ ದಾಳಿ ನಡೆಸಿಲ್ಲವೇಕೆ ಎಂದು ಪ್ರಶ್ನಿಸಿದ್ದಾರೆ.
ಹಗರಣದಲ್ಲಿ ಭಾಗಿಯಾಗಿದ್ದಾರೆಂದು ಇಟಾಲಿ ನ್ಯಾಯಾಲಯ ಹೇಳಿರುವ ವ್ಯಕ್ತಿಯಳನ್ನು ತಕ್ಷಣವೇ ಬಂಧಿಸಿ, ವಿಚಾರಣೆಗೆ ಒಳಪಡಿಸಬಾರದೇ ಎಂದು ಕೇಜ್ರಿವಾಲ್ ಪ್ರಶ್ನಿಸಿದ್ದಾರೆ. ಬಿಜೆಪಿ ಸರ್ಕಾರ ಮೊದಲು ರಾಬರ್ಟ್ ವಾಧ್ರ ರನ್ನು ರಕ್ಷಿಸಿತ್ತು. ಈಗ ಅಗಸ್ಟಾ ವೆಸ್ಟ್ ಲ್ಯಾಂಡ್ ಪ್ರಕರಣದಲ್ಲಿ ಕಾಂಗ್ರೆಸ್ ನ ನಾಯಕರನ್ನು ರಕ್ಷಿಸಲು ಯತ್ನಿಸುತ್ತಿದೆ ಎಂದು ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ. ನನ್ನ ಕಚೇರಿ ಮೇಲೆ ದಾಳಿ ನಡೆಸಿದ ಸಿಬಿಐ ತಂಡ ಈಗ ಕಾಂಗ್ರೆಸ್ ನಾಯಕರ ಮೇಲೆ ಏಕೆ ದಾಳಿ ನಡೆಸುತ್ತಿಲ್ಲ ಎಂದು ಕೇಜ್ರಿವಾಲ್ ಟ್ವಿಟರ್ ನಲ್ಲಿ ಕೇಳಿದ್ದಾರೆ.
Advertisement