

ಕೇರಳ: ಮೇ.16 ರಂದು ಕೇರಳ ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮೇ.1 ರಂದು ಪ್ರಚಾರ ಅಭಿಯಾನಕ್ಕೆ ಚಾಲನೆ ನೀಡಬೇಕಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕೇರಳ ಪ್ರವಾಸವನ್ನು ದಿಢೀರ್ ರದ್ದುಗೊಳಿಸಿದ್ದಾರೆ.
ಅನಾರೋಗ್ಯದ ಕಾರಣ ಅಮಿತ್ ಶಾ ಕೇರಳ ಪ್ರವಾಸವನ್ನು ರದ್ದುಗೊಳಿಸಿದ್ದಾರೆ ಎಂದು ತಿಳಿದುಬಂದಿದೆ. ಪೂರ್ವನಿಗದಿಯಂತೆ ಅಮಿತ್ ಶಾ, ಮೇ.1 ರಂದು ಬೆಳಿಗ್ಗೆ ಕೇರಳದಲ್ಲಿ ಕಾರ್ಯಕರ್ತರ ಸಭೆ ಹಾಗೂ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಬೇಕಿತ್ತು. ಆದರೆ ಅನಾರೋಗ್ಯದ ಕಾರಣ ಎರಡೂ ಸಭೆಗಳು ರದ್ದುಗೊಂಡಿವೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಕೇರಳ ವಿಧಾನಸಭಾ ಚುನಾವಣೆ ಬಿಜೆಪಿಗೆ ಮಹತ್ವದ ಚುನಾವಣೆಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಮೇ.6 ರಿಂದ ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಪ್ರಾರಂಭ ಮಾಡಲಿದ್ದು ಒಟ್ಟು 6 ಸಾರ್ವಜನಿಕ ಸಭೆಗಳನ್ನುದ್ದೇಶಿಸಿ ಮಾತನಾಡಲಿದ್ದಾರೆ.