ಎಂಎ ನಲ್ಲಿ ಪ್ರಧಾನಿ ಮೋದಿ ಪ್ರಥಮ ದರ್ಜೆಯಲ್ಲಿ ಪಾಸ್

ಪ್ರಧಾನಿ ನರೇಂದ್ರ ಮೋದಿ ಅವರ ವಿದ್ಯಾರ್ಹತೆ ಪ್ರಶ್ನಿಸಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಉತ್ತರ ಸಿಕ್ಕಿದೆ...
ನರೇಂದ್ರ ಮೋದಿ, ಅರವಿಂದ್ ಕೇಜ್ರಿವಾಲ್
ನರೇಂದ್ರ ಮೋದಿ, ಅರವಿಂದ್ ಕೇಜ್ರಿವಾಲ್

ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ವಿದ್ಯಾರ್ಹತೆ ಪ್ರಶ್ನಿಸಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಉತ್ತರ ಸಿಕ್ಕಿದೆ.

ಪ್ರಧಾನಿ ಮೋದಿ ಅವರು ರಾಜಕೀಯ ವಿಜ್ಞಾನ ವಿಷಯದಲ್ಲಿ ಪ್ರಥಮ ದರ್ಜೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ ಎಂದು ಕೇಂದ್ರ ಮಾಹಿತಿ ಆಯೋಗ ತಿಳಿಸಿದೆ.

ಕೇಜ್ರಿವಾಲ್ ಕೇಳಿದ್ದ ಮಾಹಿತಿಗೆ ಕೇಂದ್ರ ಮಾಹಿತಿ ಆಯೋಗದ ಅಧ್ಯಕ್ಷ ಆಚಾರ್ಯಲು ಅವರು ಮೋದಿ ಅವರ ವಿದ್ಯಾರ್ಹತೆ ಕುರಿತಂತೆ ಮಾಹಿತಿ ನೀಡುವಂತೆ ಪ್ರಧಾನಮಂತ್ರಿ ಕಾರ್ಯಾಲಯಕ್ಕೆ ನಿರ್ದೇಶನ ನೀಡಿದ್ದರು. ಅದರಂತೆ ಮೋದಿ ಗುಜರಾತ್ ವಿಶ್ವವಿದ್ಯಾಲಯದ ಹೊರ ವಿದ್ಯಾರ್ಥಿಯಾಗಿ ರಾಜಕೀಯ ಶಾಸ್ತ್ರದಲ್ಲಿ ಎಂಎ ಪದವಿಯನ್ನು ಪ್ರಥಮ ದರ್ಜೆಯಲ್ಲಿ ಪೂರ್ಣಗೊಳಿಸಿದ್ದಾರೆ ಎಂದು ಖಾಸಗಿ ಪತ್ರಿಕೆಯೊಂದು ವರದಿ ಮಾಡಿದೆ.

1983ರಲ್ಲಿ ಶೇಕಡ 62.3 ಅಂಕಗಳೊಂದಿಗೆ ಎಂಎ ಪದವಿ ಮುಗಿಸಿದ್ದ ಮೋದಿ ಅವರು ಈ ಅವಧಿಯಲ್ಲಿ ಯೋರೋಪಿಯನ್ ರಾಜಕೀಯ, ಭಾರತೀಯ ರಾಜಕೀಯ ವಿಶ್ಲೇಷಣೆ ಮತ್ತು ರಾಜಕೀಯ ಮಾನವಶಾಸ್ತ್ರ ವಿಷಯಗಳನ್ನು ಅಭ್ಯಸಿಸಿದ್ದರು ಎಂದು ವರದಿಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com