ಜಿಎಸ್ ಟಿ ಅಂಗೀಕಾರಕ್ಕೆ ಎಲ್ಲಾ ಪಕ್ಷಗಳಿಂದಲೂ ಬೆಂಬಲ ಸಿಗುವ ವಿಶ್ವಾಸವಿದೆ: ಕೇಂದ್ರ ಸರ್ಕಾರ

ರಾಜ್ಯಸಭೆಯಲ್ಲಿ ಜಿಎಸ್ ಟಿ ಮಸೂದೆಗೆ ಅಂಗೀಕಾರ ಪಡೆಯುವ ವಿಶ್ವಾಸವಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್ ಹೇಳಿದ್ದಾರೆ.
ಜಿಎಸ್ ಟಿ ಅಂಗೀಕಾರಕ್ಕೆ ಎಲ್ಲಾ ಪಕ್ಷಗಳಿಂದಲೂ ಬೆಂಬಲ ಸಿಗುವ ವಿಶ್ವಾಸವಿದೆ: ಕೇಂದ್ರ ಸರ್ಕಾರ
Updated on: 

ನವದೆಹಲಿ: ರಾಜ್ಯಸಭೆಯಲ್ಲಿ ಜಿಎಸ್ ಟಿ ಮಸೂದೆಗೆ ಅಂಗೀಕಾರ ಪಡೆಯುವ ವಿಶ್ವಾಸವಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್ ಹೇಳಿದ್ದಾರೆ.

ಜಿಎಸ್ ಟಿ ಮಸೂದೆಯ ಅಗತ್ಯತೆ ಬಗ್ಗೆ ಎಲ್ಲಾ ಪಕ್ಷಗಳಲ್ಲೂ ಒಮ್ಮತ ಮೂಡಿದೆ ಎಂದು ಹೇಳಿರುವ ಅನಂತ್ ಕುಮಾರ್, ಕೇಂದ್ರ ಸರ್ಕಾರದ ಮಸೂದೆಗೆ ಈಗಾಗಲೇ ಎಷ್ಟು ರಾಜಕೀಯ ಪಕ್ಷಗಳು ಅಧಿಕೃತವಾಗಿ ಬೆಂಬಲ ಸೂಚಿಸಿವೆ ಎಂಬ ಬಗ್ಗೆ ಮಾಹಿತಿ ನೀಡಿಲ್ಲ.

ಜಿಎಸ್ ಟಿ ಮಸೂದೆ ಅಂಗೀಕಾರದಿಂದ ಎಲ್ಲರೂ ಗೆಲ್ಲುವ ವಾತಾವರಣ ನಿರ್ಮಾಣವಾಗಲಿದ್ದು ಎಲ್ಲಾ ಪಕ್ಷದವರು ಜಿಎಸ್ ಟಿ ಮಸೂದೆಗೆ ಬೆಂಬಲ ನೀಡಲಿದ್ದಾರೆ ಎಂದು ಅನಂತ್ ಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಆಗಸ್ಟ್ 3 ರ ಅಧಿವೇಶನದಲ್ಲಿ ಮಸೂದೆ ಮೇಲಿನ ಚರ್ಚೆಗೆ ಸಮಯಾವಕಾಶ ಸಿಗಲಿದ್ದು, ಬುಧವಾರವೇ ಮಸೂದೆ ಅಂಗೀಕಾರವಾಗುವ ಸಾಧ್ಯತೆ ಇದೆ ಎಂದು ಅನಂತ್ ಕುಮಾರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com