ಅಮಿತ್ ಶಾ ಗುಜರಾತ್ ಸಿಎಂ ಆಗುವುದಿಲ್ಲ: ಬಿಜೆಪಿ

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಗುಜರಾತ್ ಸಿಎಂ ಆಗುವ ಸಾಧ್ಯತೆ ಇದೆ ಎಂಬ ಊಹಾಪೋಹಗಳ ಹಿನ್ನೆಲೆಯಲ್ಲಿ ಬಿಜೆಪಿ ಸ್ಪಷ್ಟನೆ ನೀಡಿದೆ.
ಅಮಿತ್ ಶಾ
ಅಮಿತ್ ಶಾ

ನವದೆಹಲಿ: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಗುಜರಾತ್ ಸಿಎಂ ಆಗುವ ಸಾಧ್ಯತೆ ಇದೆ ಎಂಬ ಊಹಾಪೋಹಗಳ ಹಿನ್ನೆಲೆಯಲ್ಲಿ ಬಿಜೆಪಿ ಸ್ಪಷ್ಟನೆ ನೀಡಿದ್ದು ಅಮಿತ್ ಶಾ ಗುಜರಾತ್ ಸಿಎಂ ಆಗುವುದಿಲ್ಲ ಎಂದು ಹೇಳಿದೆ.

ಗುಜರಾತ್ ನ ಮುಂದಿನ ಸಿಎಂ ಆಯ್ಕೆ ವಿಚಾರವಾಗಿ ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆ ನಂತರ ಮಾತನಾಡಿರುವ ವೆಂಕಯ್ಯ ನಾಯ್ಡು ಅಮಿತ್ ಶಾ ಗುಜರಾತ್ ಸಿಎಂ ಆಗುವುದಿಲ್ಲ ಎಂಬ ಸ್ಪಷ್ಟನೆ ನೀಡಿದ್ದಾರೆ. ಗುಜರಾತ್ ನ ಮುಂದಿನ ಸಿಎಂ ಗುಜರಾತ್ ನ ಬಿಜೆಪಿ ಶಾಸಕರಲ್ಲೇ ಒಬ್ಬರಾಗಲಿದ್ದಾರೆ ಎಂದು ವೆಂಕಯ್ಯ ನಾಯ್ಡು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಅಮಿತ್ ಶಾ ರಾಷ್ಟ್ರಾಧ್ಯಕ್ಷರಾಗಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ, ಪಕ್ಷ ಅವರ ನೇತೃತ್ವದಲ್ಲಿ ಉತ್ತಮ ಸಾಧನೆ ಮಾಡಿದೆ ಎಂದು ವೆಂಕಯ್ಯ ನಾಯ್ಡು ತಿಳಿಸಿದ್ದಾರೆ. ಪಕ್ಷಕ್ಕೆ ಅವರ ನೇತೃತ್ವದ ಅಗತ್ಯವಿದೆ, ಗುಜರಾತ್ ನ ಶಾಸಕರ ಪೈಕಿ ಒಬ್ಬರನ್ನು ಸಿಎಂ ಆಗಿ ಆಯ್ಕೆ ಮಾಡಲಾಗುತ್ತದೆ ಎಂದಿದ್ದಾರೆ. ಅಮಿತ್ ಶಾ ಗುಜರಾತ್ ನ ಸಿಎಂ ಆಗದೆ ಹೋದರೂ ಸಿಎಂ ಆಯ್ಕೆ ಪ್ರಕ್ರಿಯೆಯ ಭಾಗವಾಗಿರುವ  ಶಾಸಕರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವೆಂಕಯ್ಯ ನಾಯ್ಡು ತಿಳಿಸಿದ್ದಾರೆ. ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಹಾಗು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸರೋಜ್ ಪಾಂಡೆ ಸಹ ಗುಜರಾತ್ ಗೆ ವೀಕ್ಷಕರಾಗಿ ತೆರಳಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com