ಮುಂಬೈ-ಗೋವಾ ಹೆದ್ದಾರಿಯಲ್ಲಿ ಸೇತುವೆ ಕುಸಿತ; ರಕ್ಷಣಾ ಕಾರ್ಯ ಪ್ರಗತಿಯಲ್ಲಿ: ಮುಖ್ಯಮಂತ್ರಿ ಫಡ್ನವೀಸ್

ಎರಡು ಬಸ್ಸುಗಳು ಸೇರಿದಂತೆ ಹಲವಾರು ವಾಹನಗಳು ನೀರಿನಲ್ಲಿ ಕೊಚ್ಚಿ ಹೋಗಿವೆ ಎಂದು ರಾಯಗಢ...
ಮಳೆಯ ಪ್ರವಾಹಕ್ಕೆ ಕುಸಿದು ಹೋಗಿರುವ ಸೇತುವೆ, ಒಳ ಚಿತ್ರದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್
ಮಳೆಯ ಪ್ರವಾಹಕ್ಕೆ ಕುಸಿದು ಹೋಗಿರುವ ಸೇತುವೆ, ಒಳ ಚಿತ್ರದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್
ಮುಂಬೈ: ಎರಡು ಬಸ್ಸುಗಳು ಸೇರಿದಂತೆ ಹಲವಾರು ವಾಹನಗಳು ನೀರಿನಲ್ಲಿ ಕೊಚ್ಚಿ ಹೋಗಿವೆ ಎಂದು ರಾಯಗಢ ಜಿಲ್ಲಾಧಿಕಾರಿ ಶೀತಲ್ ಉಗಲೆ ತಿಳಿಸಿದ್ದಾರೆ.
ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ತಾವು ಪರಿಸ್ಥಿತಿಯನ್ನು ನಿಗಾವಹಿಸುತ್ತಿರುವುದಾಗಿ ತಿಳಿಸಿದ್ದಾರೆ. '' ರಾಯಗಢ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಜಿಲ್ಲಾಧಿಕಾರಿಯವರಿಗೆ ಕರೆ ಮಾಡಿ ಮುಂಬೈ-ಗೋವಾ ಹೆದ್ದಾರಿಯಲ್ಲಿ ಸೇತುವೆ ಕುಸಿತಗೊಂಡಿರುವ ಬಗ್ಗೆ ಮಾಹಿತಿ ಕೇಳಿ ತಿಳಿದುಕೊಂಡಿದ್ದೇನೆ. ಅಧಿಕಾರಿಗಳು ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ'' ಎಂದು ಹೇಳಿದರು.
ಸಾವಿತ್ರಿ ನದಿಗೆ ಅಡ್ಡಲಾಗಿ ಬ್ರಿಟಿಷರ ಕಾಲದಲ್ಲಿ ಕಟ್ಟಲಾಗಿರುವ ಸೇತುವೆಗೆ ಪರ್ಯಾಯವಾಗಿ ಮತ್ತೊಂದು ಹೊಸ ಸೇತುವೆ ನಿರ್ಮಿಸಲಾಗಿದೆ. ಹಳೆಯ ಸೇತುವೆ ನಿನ್ನೆಯ ಭಾರೀ ಮಳೆಗೆ ಕುಸಿದಿದೆ. ಎಂದು ಮುಖ್ಯಮಂತ್ರಿ ವಿವರಿಸಿದ್ದಾರೆ.
ಮಹಾಬಲೇಶ್ವರ ಹಿನ್ನೀರಿನಲ್ಲಿ ಭಾರೀ ಮಳೆ ಸುರಿದು ಸಾವಿತ್ರಿ ನದಿಯಲ್ಲಿ ಪ್ರವಾಹ ಉಂಟಾದ್ದರಿಂದ ಅತೀವ ಒತ್ತಡದಿಂದಾಗಿ ಹಳೆಯ ಸೇತುವೆ ಕುಸಿದು ಬಿದ್ದಿದೆ ಎಂದು ಪ್ರಾಥಮಿಕವಾಗಿ ಹೇಳಲಾಗುತ್ತಿದೆ. ಈಗ ಆ ಹೆದ್ದಾರಿಯಲ್ಲಿ ಸಂಚಾರ ಸಂಪೂರ್ಣ ನಿಂತುಹೋಗಿದೆ. ಹೊಸ ಸೇತುವೆಯ ಗುಣಮಟ್ಟ ಮತ್ತು ಸಾಮರ್ಥ್ಯವನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ ಎಂದು ಫಡ್ನವೀಸ್ ಟ್ವೀಟ್ ಮಾಡಿದ್ದಾರೆ.
ಘಟನೆಯಲ್ಲಿ ಎಷ್ಟು ಸಾವು-ನೋವು ಸಂಭವಿಸಿದೆ ಎಂದು ಇನ್ನೂ ದೃಢಪಟ್ಟಿಲ್ಲ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com