ಸೋನಿಯಾ ಆರೋಗ್ಯ ಸ್ಥಿರ: ವಿಶೇಷ ತಜ್ಞರ ವೀಕ್ಷಣೆಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ

ಅನಾರೋಗ್ಯದಿಂದ ನಿನ್ನೆ ಉತ್ತರ ಪ್ರದೇಶದ ವಾರಣಾಸಿಯಲ್ಲಿ ಚುನಾವಣಾ ಪ್ರಚಾರವನ್ನು ಅರ್ಧಕ್ಕೆ ಮೊಟಕುಗೊಳಿಸಿ ದೆಹಲಿಗೆ...
ಸೋನಿಯಾ ಗಾಂಧಿ
ಸೋನಿಯಾ ಗಾಂಧಿ
Updated on: 
ನವದೆಹಲಿ: ಅನಾರೋಗ್ಯದಿಂದ ನಿನ್ನೆ ಉತ್ತರ ಪ್ರದೇಶದ ವಾರಣಾಸಿಯಲ್ಲಿ ಚುನಾವಣಾ ಪ್ರಚಾರವನ್ನು ಅರ್ಧಕ್ಕೆ ಮೊಟಕುಗೊಳಿಸಿ ದೆಹಲಿಗೆ ವಾಪಸಾಗಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಆರೋಗ್ಯ ಇಂದು ಸ್ಥಿರವಾಗಿದೆ. ಅವರು ದೆಹಲಿಯ ಆರ್ ಆರ್ ಆಸ್ಪತ್ರೆಯಲ್ಲಿ ವಿಶೇಷ ತಜ್ಞ ವೈದ್ಯರ ತಪಾಸಣೆಯಲ್ಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಅವರ ಆರೋಗ್ಯದ ಬಗ್ಗೆ ಆಸ್ಪತ್ರೆಯಿಂದ ಯಾವುದೇ ಹೇಳಿಕೆ ಬಿಡುಗಡೆಯಾಗದಿದ್ದರೂ ಸಹ ವೈದ್ಯರ ತಪಾಸಣೆಯಲ್ಲಿ ಅವರ ಆರೋಗ್ಯದಲ್ಲಿ ಸುಧಾರಣೆಯಾಗುತ್ತಿದೆ ಎಂದು ಹೇಳಿದೆ.
ಎಐಸಿಸಿ ಮಾಧ್ಯಮ ಘಟಕದ ಮುಖ್ಯಸ್ಥ ರಣದೀಪ್ ಸುರ್ಜೆವಾಲಾ, ಸೋನಿಯಾ ಗಾಂಧಿಯವರ ಆರೋಗ್ಯ ಸ್ಥಿರವಾಗಿದ್ದು, ಸುಧಾರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಸೋನಿಯಾ ಅವರ ಮಕ್ಕಳಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಅವರ ಜೊತೆಗಿದ್ದು, ಅಳಿಯ ರಾಬರ್ಟ್ ವಾದ್ರಾ ಕೂಡ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com