ಹರಿಶ್ ರಾವತ್
ದೇಶ
ಅತ್ಯಾಚಾರ ಸಂತ್ರಸ್ತೆಯ ಹೇಳಿಕೆ, ರಾವತ್ ರಾಜಿನಾಮೆಗೆ ಬಿಜೆಪಿ ಆಗ್ರಹ
ಬಿಜೆಪಿ ನಾಯಕ ಹರಕ್ ಸಿಂಗ್ ರಾವತ್ ಅವರ ವಿರುದ್ಧ ಅತ್ಯಾಚಾರ ಕೇಸ್ ದಾಖಲಿಸಲು ಉತ್ತರಾಖಂಡ್ ಮುಖ್ಯಮಂತ್ರಿ ಕಾರಣ ಎಂಬ ಸಂತ್ರಸ್ತೆಯ...
ಡೆಹ್ರಾಡೂನ್: ಬಿಜೆಪಿ ನಾಯಕ ಹರಕ್ ಸಿಂಗ್ ರಾವತ್ ಅವರ ವಿರುದ್ಧ ಅತ್ಯಾಚಾರ ಕೇಸ್ ದಾಖಲಿಸಲು ಉತ್ತರಾಖಂಡ್ ಮುಖ್ಯಮಂತ್ರಿ ಕಾರಣ ಎಂಬ ಸಂತ್ರಸ್ತೆಯ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಉತ್ತರಾಖಂಡ್ ಸಿಎಂ ಹರಿಶ್ ರಾವತ್ ರಾಜಿನಾಮೆಗೆ ಬಿಜೆಪಿ ಆಗ್ರಹಿಸಿದೆ. ಅಲ್ಲದೆ ಅವರಿಗೆ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಇಲ್ಲ ಎಂದು ಗುರುವಾರ ಹೇಳಿದೆ.
ಹರಕ್ ಸಿಂಗ್ ರಾವತ್ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿ ಕೇಸ್ ದಾಖಲಿಸಿದ್ದ ಮಹಿಳೆ ಇದೀಗ ಯು ಯರ್ನ್ ಹೊಡೆದಿದ್ದು, ಹರಿಶ್ ರಾವತ್ ಒತ್ತಡದಿಂದಾಗಿ ತಾನು ಕೇಸ್ ದಾಖಲಿಸಿರುವುದಾಗಿ ಹೇಳಿದ್ದಾರೆ.
ಹರಕ್ ಸಿಂಗ್ ರಾವತ್ ವಿರುದ್ಧ ಸುಳ್ಳು ಅತ್ಯಾಚಾರ ಕೇಸ್ ದಾಖಲಿಸುವಂತೆ ಒತ್ತಡ ಹೇರಿದ ಉತ್ತರಾಖಂಡ್ ಸಿಎಂಗೆ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಅಜಯ್ ಭಟ್ ಅವರು ಪತ್ರಿಕಾ ಹೇಳಿಕೆ ನೀಡಿದ್ದಾರೆ.
ಇತ್ತೀಚಿಗಷ್ಟೇ 32 ವರ್ಷದ ಮಹಿಳೆಯೊಬ್ಬರು ಉತ್ತರಾಖಂಡ್ ಮಾಜಿ ಸಚಿವ ಹಾಗೂ ಹಾಲಿ ಬಿಜೆಪಿ ಶಾಸಕ ಹರಕ್ ಸಿಂಗ್ ರಾವತ್ ಅವರು ವಿರುದ್ಧ ಅತ್ಯಾಚಾರ ಹಾಗೂ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿದ್ದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ