
ಮುಂಬೈ: ಮುಂಬೈ-ಗೋವಾ ಹೆದ್ದಾರಿ ಸೇತುವೆ ಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೇ ಏರಿಕೆಯಾಗಿದೆ.
ಮುಂಬೈನಿಂದ ಸುಮಾರು 84 ಕಿ.ಮೀ ದೂರದಲ್ಲಿರುವ ರಾಯಗಡ ಜಿಲ್ಲೆಯ ಸಮೀಪದಲ್ಲಿರುವ ಬ್ರಿಟೀಷ್ ಕಾಲದ ಮೇಲ್ಸೇತುವೆ ಭಾರಿ ಮಳೆ ಹಾಗೂ ಪ್ರವಾಹದಿಂದಾಗಿ ಕುಸಿದುಬಿದ್ದಿತ್ತು. ಈ ವೇಳೆ ಸೇತುವೆ ಚಲಿಸುತ್ತಿದ್ದ ಎರಡು ಬಸ್ ಹಾಗೂ 4 ಕಾರುಗಳು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದವು. ಪ್ರಾಥಮಿಕ ಮಾಹಿತಿ ಪ್ರಕಾರ ಈ 6 ವಾಹನಗಳಲ್ಲಿ ಒಟ್ಟು 42 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.
ಈ ಪೈಕಿ 14 ಶವಗಳನ್ನು ರಕ್ಷಣಾ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ಇದರಲ್ಲಿ 3 ಮಹಿಳೆ ಹಾಗೂ 11 ಪುರುಷರ ಮೃತದೇಹ ಪತ್ತೆಯಾಗಿದೆ. ಇನ್ನುಳಿದಂತೆ ನಾಪತ್ತೆಯಾದವರಿಗಾಗಿ ವ್ಯಾಪಕ ಶೋಧ ನಡೆಸಲಾಗುತ್ತಿದೆ.
ಪ್ರಕರಣ ಕುರಿತಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ನ್ಯಾಯಾಂಗ ತನಿಖೆಗೆ ಆಗ್ರಹಿಸಿದ್ದಾರೆ.
Advertisement