ಮುಜಾಫರ್ ನಗರ: ಹಣಕಾಸಿನ ವಿವಾದ ಹಿನ್ನೆಲೆಯಲ್ಲಿ ಮೂವರ ಗುಂಡಿಕ್ಕಿ ಹತ್ಯೆ

ಮುಜಾಫರ್ ನಗರದ ದರೋಗ ಕೋತಿ ಪ್ರದೇಶದಲ್ಲಿ ಹಣಕಾಸಿನ ವಿವಾದಕ್ಕೆ ಸಂಬಂಧಿಸಿದಂತೆ ಮೂವರನ್ನು ಗುಂಡಿಕ್ಕಿ ಕೊಂದ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಮುಜಾಫರ್ ನಗರ: ಮುಜಾಫರ್ ನಗರದ ದರೋಗ ಕೋತಿ ಪ್ರದೇಶದಲ್ಲಿ ಹಣಕಾಸಿನ ವಿವಾದಕ್ಕೆ ಸಂಬಂಧಿಸಿದಂತೆ ಮೂವರನ್ನು ಗುಂಡಿಕ್ಕಿ ಕೊಂದ ಘಟನೆ ಶುಕ್ರವಾರ ನಡೆದಿದೆ. ಅಲ್ಲದೆ ಈ ವೇಳೆ ಹಲವರು ಗಾಯಗೊಂಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಏಳು ಮಂದಿಯ ವಿರುದ್ಧ ಕೇಸ್ ದಾಖಲಿಸಿದ್ದು, ಒಂಬತ್ತು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಎಂದು ಪೊಲೀಸರು ತಿಳಿಸಿದ್ದಾರೆ.
ಗುಂಡಿನ ದಾಳಿಯಲ್ಲಿ ಮೃತಪಟ್ಟವರನ್ನು ಗುಲ್ಷೇರ್, ಹಜಿ ಇಸ್ಲಾಂ ಹಾಗೂ ಅಖ್ತರ್ ಎಂದು ಗುರುತಿಸಲಾಗಿದೆ.
ಕಳೆದ ರಾತ್ರಿ ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದಂತೆ ಒಂದೇ ಸಮುದಾಯಕ್ಕೆ ಸೇರಿದ ಎರಡು ಗುಂಪುಗಳ ನಡುವೆ ವಾಗ್ವಾದ ನಡೆಯುತ್ತಿತ್ತು, ಈ ವೇಳೆ ಅಪರಿಚಿತ ಯುವಕನೊಬ್ಬ ಮನಬಂದಂತೆ ಗುಂಡು ಹಾರಿಸಿದ್ದಾನೆ ಎಂದು ಎಸ್ಎಸ್ ಪಿ ದೀಪಕ್ ಕುಮಾರ್ ಅವರು ತಿಳಿಸಿದ್ದಾರೆ.
ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಎಸ್ಎಸ್ ಪಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com