ರಾಯ್ಪುರ: ಚತ್ತೀಸ್ ಗಢದ ದಂಟೆವಾಡ ಜಿಲ್ಲೆಯಲ್ಲಿ ಶುಕ್ರವಾರ ಭದ್ರತಾ ಪಡೆ ಮತ್ತು ನಕ್ಸಲರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಓರ್ವ ಮಹಿಳೆ ಸೇರಿದಂತೆ ಮೂವರು ನಕ್ಸಲರನ್ನು ಹತ್ಯೆ ಮಾಡಲಾಗಿದೆ.
ಇಂದು ಬೆಳಗ್ಗೆ ಕಚೆಗೇಟ್ ಅರಣ್ಯ ಪ್ರದೇಶದಲ್ಲಿ ಜಿಲ್ಲಾ ಮೀಸಲು ಪೊಲೀಸ್ ಪಡೆಯ ತಂಡ ನಕ್ಸಲರ ವಿರುದ್ಧ ನಡೆಸಿದ ಎನ್ ಕೌಂಟರ್ ನಲ್ಲಿ ಮಹಿಳೆ ಸೇರಿದಂತೆ ಮೂವರು ನಕ್ಸಲರು ಮೃತಪಟ್ಟಿದ್ದಾರೆ ಎಂದು ದಾಂಟೆವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಮಲೋಚನ್ ಕಶ್ಯಪ್ ಅವರು ಪಿಟಿಐಗೆ ತಿಳಿಸಿದ್ದಾರೆ,
ಖಚಿತ ಮಾಹಿತಿಯನ್ನು ಆಧರಿಸಿ ಪೊಲೀಸರು ನಕ್ಸಲರ ವಿರುದ್ಧ ಕಾರ್ಯಾಚರಣೆಗಿಳಿದಿದ್ದರು. ಈ ವೇಳೆ ಶಸ್ತ್ರ ಸಜ್ಜಿತ ನಕ್ಸಲರ ತಂಡವೊಂದು ಪೊಲೀಸರ ಗುಂಡಿನ ದಾಳಿ ನಡೆಸಿದೆ. ಇದಕ್ಕೆ ಪ್ರತಿಯಾಗಿ ಪೊಲೀಸರು ಸಹ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಕಶ್ಯಪ್ ಹೇಳಿದ್ದಾರೆ.