ಜಮ್ಮುವಿನಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ: 2 ಯೋಧರು ಹುತಾತ್ಮ, ಓರ್ವ ಉಗ್ರ ಬಲಿ

ಉಗ್ರರ ವಿರುದ್ಧದ ಕಾರ್ಯಾಚರಣೆ ವೇಳೆ ಇಬ್ಬರು ಗಡಿ ಭದ್ರತಾ ಪಡೆ(ಬಿಎಸ್ಎಫ್) ಯೋಧರು ಹುತಾತ್ಮರಾಗಿದ್ದು, ಓರ್ವ ಉಗ್ರನನ್ನು ಯೋಧರು ಹತ್ಯೆ...
ಬಿಎಸ್ಎಫ್
ಬಿಎಸ್ಎಫ್
Updated on: 

ಶ್ರೀನಗರ: ಉಗ್ರರ ವಿರುದ್ಧದ ಕಾರ್ಯಾಚರಣೆ ವೇಳೆ ಇಬ್ಬರು ಗಡಿ ಭದ್ರತಾ ಪಡೆ(ಬಿಎಸ್ಎಫ್) ಯೋಧರು ಹುತಾತ್ಮರಾಗಿದ್ದು, ಓರ್ವ ಉಗ್ರನನ್ನು ಯೋಧರು ಹತ್ಯೆ ಮಾಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಮಚಿಲ್ ಪ್ರದೇಶದಲ್ಲಿ ಉಗ್ರರ ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಯೋಧರು ಕಾರ್ಯಾಚರಣೆ ಕೈಗೊಂಡಿದ್ದರು. ಈ ವೇಳೆ ಉಗ್ರರು ಯೋಧರ ಮೇಲೆ ಗುಂಡು ಹಾರಿಸಿದ್ದು ಪರಿಣಾಮ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಇನ್ನು ಕಾರ್ಯಾಚರಣೆ ಮುಂದುರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉಗ್ರರ ವಿರುದ್ಧದ ಕಾರ್ಯಾಚರಣೆಗಾಗಿ ಹೆಚ್ಚುವರಿ ಬಿಎಸ್ಎಫ್ ತಂಡಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ ಎಂದು ಕೆಲ ಸುದ್ದಿ ಮೂಲಗಳು ವರದಿ ಮಾಡಿವೆ.

ಇದೇ ವೇಳೆ ಮಣಿಪುರದ ಇಂಫಾಲ್-ದಿಮಾಪುರ ರಸ್ತೆಯಲ್ಲಿನ ಕಂಗ್ ಪೋಕ್ಷಿ ಪಟ್ಟಣದ ಸಮೀಪ ಕಡಿಮೆ ತೀವ್ರತೆಯ ಸ್ಫೋಟಕ ಸಾಧನ ಸ್ಫೋಟಗೊಂಡಿದ್ದು ಇಬ್ಬರು ಬಿಎಸ್ಎಫ್ ಯೋಧರು ಗಾಯಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com