ಇರೋಮ್ ಶರ್ಮಿಳಾ 16 ವರ್ಷಗಳ ಸುದೀರ್ಘ ಉಪವಾಸ ಇಂದು ಅಂತ್ಯ

ಸಶಸ್ತ್ರಪಡೆ ವಿಶೇಷಾಧಿಕಾರ ಕಾಯ್ದೆ (ಎಎಫ್‌ಎಸ್‌ಪಿಎ) ರದ್ದುಮಾಡಬೇಕೆಂದು ಆಗ್ರಹಿಸಿ 16 ವರ್ಷಗಳಿಂದ ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹಕ್ಕೆ ಇರೋಮ್‌ ಶರ್ಮಿಳಾ ...
ಇರೋಮ್ ಶರ್ಮಿಳಾ
ಇರೋಮ್ ಶರ್ಮಿಳಾ
Updated on

ಇಂಫಾಲ: ಸಶಸ್ತ್ರಪಡೆ ವಿಶೇಷಾಧಿಕಾರ ಕಾಯ್ದೆ (ಎಎಫ್‌ಎಸ್‌ಪಿಎ) ರದ್ದುಮಾಡಬೇಕೆಂದು ಆಗ್ರಹಿಸಿ 16 ವರ್ಷಗಳಿಂದ ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹಕ್ಕೆ ಇರೋಮ್‌ ಶರ್ಮಿಳಾ ಇಂದು ಅಂತ್ಯ ಹಾಡಿದ್ದಾರೆ.

ಶರ್ಮಿಳಾ ಅವರನ್ನು ಪೊಲೀಸ್‌ ಬಿಗಿ ಭದ್ರತೆಯಲ್ಲಿ ಮ್ಯಾಜಿಸ್ಟ್ರೇಟ್‌ ಮುಂದೆ ಹಾಜರುಪಡಿಸಲಾಯಿತು. ನಂತರ ಅವರು ಉಪವಾಸ ಸತ್ಯಾಗ್ರಹವನ್ನು ಕೈಬಿಟ್ಟಿರುವುದಾಗಿ ಘೋಷಣೆ ಮಾಡಿದರು. ಮಣಿಪುರದ ಉಕ್ಕಿನ ಮಹಿಳೆ ಎಂದೇ ಖ್ಯಾತರಾಗಿರುವ ಶರ್ಮಿಳಾ ಅವರಿಗೆ 2000 ಇಸವಿಯಿಂದ ದ್ರವರೂಪದ ಆಹಾರವನ್ನು ಮೂಗಿನ ಮೂಲಕ ಅಳವಡಿಸಲಾಗಿರುವ ನಳಿಕೆಯಿಂದ ನೀಡಲಾಗುತ್ತಿತ್ತು.

ಈಶಾನ್ಯ ರಾಜ್ಯಗಳು ಮತ್ತು ಕಾಶ್ಮೀರದಲ್ಲಿ  ಸೇನಾ ಯೋಧರು ನಡೆಸುತ್ತಿದ್ದ ದಬ್ಬಾಳಿಕೆ ಮತ್ತು ದೌರ್ಜನ್ಯವನ್ನು ಖಂಡಿಸಿ ಇರೋಮ್‌ ಶರ್ಮಿಳಾ  2000ನೇ ವರ್ಷದಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು. ಆದರೆ ಸರ್ಕಾರ ಯಾವುದೇ ಧನಾತ್ಮಕ ಪ್ರತಿಕ್ರಿಯೆ ನೀಡದ ಕಾರಣ ತಮ್ಮ ಉಪವಾಸವನ್ನು ಅಂತ್ಯಗೊಳಿಸಿದ್ದಾರೆ. ಇನ್ನೂ ಮಣಿಪುರ ಲೋಕಸಭೆ ಚುನಾವಣೆಗೆ ಆಮ್ ಆದ್ಮಿ ಪಕ್ಷದಿಂದ ಸ್ಪರ್ಧಿಸುವಂತೆ ಎಎಪಿ ನೀಡಿದ ಆಹ್ವಾನವನ್ನು ಶರ್ಮಿಳಾ ತಿರಸ್ಕರಿಸಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಕೂಡ ಶರ್ಮಿಳಾ ರನ್ನು ತಮ್ಮ ಪಕ್ಷಕ್ಕೆ ಸೇರ್ಪಡೆಗೊಳಿಸಲು ತುದಿಗಾಲಲ್ಲಿ ನಿಂತಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com