ಕಾಶ್ಮೀರ ನಮ್ಮ ಸಮಸ್ಯೆ, ಪಾಕಿಸ್ತಾನವನ್ನು ದೂಷಿಸುವುದನ್ನು ಬಿಡಿ: ಪ್ರಧಾನಿಗೆ ಮಣಿಶಂಕರ್ ಅಯ್ಯರ್ ಸಲಹೆ

ಕಾಶ್ಮೀರದಲ್ಲಿ ಉಂಟಾಗಿರುವ ಪರಿಸ್ಥಿತಿಗೆ ಪಾಕಿಸ್ತಾನವನ್ನು ದೂಷಿಸುವುದನ್ನು ಬಿಡಬೇಕು ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಸಲಹೆ ನೀಡಿದ್ದಾರೆ.
ಮಣಿಶಂಕರ್ ಅಯ್ಯರ್
ಮಣಿಶಂಕರ್ ಅಯ್ಯರ್
Updated on: 

ನವದೆಹಲಿ: ಕಾಶ್ಮೀರದಲ್ಲಿ ಉಂಟಾಗಿರುವ ಗಲಭೆ ಪರಿಸ್ಥಿತಿಯ ಬಗ್ಗೆ ಮಾತನಾಡಿರುವ ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್, ಕಾಶ್ಮೀರದಲ್ಲಿ ಉಂಟಾಗಿರುವ ಪರಿಸ್ಥಿತಿಗೆ ಪಾಕಿಸ್ತಾನವನ್ನು ದೂಷಿಸುವುದನ್ನು ಬಿಡಬೇಕು ಎಂದು ಸಲಹೆ ನೀಡಿದ್ದಾರೆ.

ಕಾಶ್ಮೀರ ನಮ್ಮ ಸಮಸ್ಯೆ, ಇದಕ್ಕಾಗಿ ಪಾಕಿಸ್ತಾನವನ್ನು ದೂಷಿಸುವುದನ್ನು ನಿಲ್ಲಿಸಬೇಕು ಎಂದು ಮಣಿಶಂಕರ್ ಅಯ್ಯರ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲಹೆ ನೀಡಿದ್ದು, ಪಾಕಿಸ್ತಾನ- ಭಾರತದ ನಡುವೆ ದ್ವಿಪಕ್ಷೀಯ ಮಾತುಕತೆ ನಡೆಯಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಕಾಶ್ಮೀರವನ್ನು ನಮ್ಮದು ಎಂದು ಹೇಳಿದರೆ ಸಾಲದು, ಕಾಶ್ಮೀರಿಗಳನ್ನೂ ಸಹ ನಮ್ಮವರೇ ಎಂದು ತೋರಿಸಬೇಕು ಎಂದಿರುವ ಮಣಿಶಂಕರ್ ಅಯ್ಯರ್, ಪ್ರತ್ಯೇಕತಾವಾದಿಗಳೊಂದಿಗೂ ಮಾತುಕತೆ ನಡೆಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಕರೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನದೊಂದಿಗೆ, ಪ್ರತ್ಯೇಕತಾವಾದಿಗಳೊಂದಿಗೆ ಮಾತನಾಡದೆ ಮತ್ತೇನು ಗೋ ರಕ್ಷಕರೊಂದಿಗೆ ಮಾತನಾಡುತ್ತಾರಾ? ಎಂದು ಮಣಿಶಂಕರ್ ಅಯ್ಯರ್ ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕಾಶ್ಮೀರ ವಿಷಯದಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಹಾದಿಯಲ್ಲೇ ನಡೆಯಬೇಕು. ಅಷ್ಟೇ ಅಲ್ಲದೆ ನರಸಿಂಹ ರಾವ್ ಸರ್ಕಾರದಿಂದ ಹಿಡಿದಿ ಮನಮೋಹನ್ ಸಿಂಗ್ ಅವರ ಸರ್ಕಾರಗಳ ನಡೆಯನ್ನು ಮೋದಿ ಗಮನದಲ್ಲಿಟ್ಟುಕೊಳ್ಳಬೇಕು ಎಂದು ಮಣಿಶಂಕರ್ ಅಯ್ಯರ್ ಸಲಹೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com