ದೇಶ

ಕೂಡಂಕುಳಂ ಅಣು ವಿದ್ಯುತ್ ಘಟಕ ರಾಷ್ಟ್ರಕ್ಕೆ ಸಮರ್ಪಿಸಿದ ಮೋದಿ, ಜಯಾ, ಪುಟಿನ್

ಕೂಡಂಕುಳಂ ಅಣು ವಿದ್ಯುತ್ ಘಟಕ ರಾಷ್ಟ್ರಕ್ಕೆ ಸಮರ್ಪಿಸಿದ ಮೋದಿ, ಜಯಾ, ಪುಟಿನ್
ನರೇಂದ್ರ ಮೋದಿ
Published On :
ಚೆನ್ನೈ: ಸುಮಾರು ಮೂರು ದಶಕಗಳ ಒಪ್ಪಂದದ ನಂತರ ರಷ್ಯಾದ ಸಹಯೋಗದೊಂದಿಗೆ ತಮಿಳುನಾಡಿನ ಕೂಡಂಕುಳಂನಲ್ಲಿ ಸ್ಥಾಪಿಸಲಾಗಿರುವ ಅಣು ವಿದ್ಯುತ್ ಸ್ಥಾವರದ ಮೊದಲ ಘಟಕವನ್ನು ಪ್ರಧಾನಿ ನರೇಂದ್ರ ಮೋದಿ, ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಹಾಗೂ ರಷ್ಯಾ ಅಧ್ಯಕ್ಷ ವ್ಲಾಡಿಮೀರ್ ಪುಟಿನ್ ಅವರು ಜಂಟಿಯಾಗಿ ಬುಧವಾರ ದೇಶಕ್ಕೆ ಸಮರ್ಪಿಸಿದ್ದಾರೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ಈ ಮೂವರು ನಾಯಕರು ಅಣು ವಿದ್ಯುತ್ ಸ್ಥಾವರದ ಮೊದಲ ಘಟಕವನ್ನು ಇಂದು ಲೋಕಾರ್ಪಣೆ ಮಾಡಿದರು. ವದೆಹಲಿಯಲ್ಲಿ ನಡೆದ ವಿಡಿಯೋ ಕಾನ್ಫರೆನ್ಸ್ ನಲ್ಲಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಕೇಂದ್ರ ಸಚಿವ ಪೊನ್ ರಾಧಾಕೃಷ್ಣನ್ ಅವರು ಪ್ರಧಾನಿ ಅವರಿಗೆ ಸಾಥ್ ನೀಡಿದ್ದರು. ಮಾಸ್ಕೋ ಕಚೇರಿಯಲ್ಲಿ ಪುಟಿನ್ ಕುಳಿತಿದ್ದರು, ಜಯಲಲಿತಾ ಅವರು ಚೆನ್ನೈನ ಸೆಕ್ರಟರಿಯೇಟ್ ನಲ್ಲಿ ಹಾಜರಿದ್ದರು.
ಲೋಕಾರ್ಪಣೆ ಮಾಡಿ ಮಾತನಾಡಿದ ಮೋದಿ, ಸ್ವಚ್ಛ ಇಂಧನ ಉತ್ಪಾದನೆ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನ ಭಾರತದ ಪ್ರಯತ್ನಗಳಿಗೆ ಕೂಡಂಕುಳಂ 1 ಅಣು ವಿದ್ಯುತ್ ಸ್ಥಾವರವು ಮಹತ್ವದ ಸೇರ್ಪಡೆ ಎಂದರು. ಅಲ್ಲದೆ ಭಾರತ – ರಷ್ಯಾ ಮೈತ್ರಿ ದೀರ್ಘಕಾಲೀನದ್ದಾಗಲಿ ಎಂದು ಪ್ರಧಾನಿ ಹಾರೈಸಿದರು.
ಚೀನಾದಲ್ಲಿ ನಡೆಯಲಿರುವ ಜಿ20 ಶೃಂಗಸಭೆಯಲ್ಲಿ ನಿಮ್ಮ ಭೇಟಿಯನ್ನು ನಾನು ಎದುರು ನೋಡುತ್ತಿದ್ದೇನೆ. ಇಂದಿನ ಸಮಾರಂಭ ಭಾರತ ಮತ್ತು ರಷ್ಯಾದ ಇಂಜಿನಿಯರ್​ಗಳ ತಂಡಕ್ಕೆ ಅತ್ಯಂತ ಹರ್ಷದ ಸಂದರ್ಭ. ಅವರ ಅವಿರತ ಶ್ರಮಕ್ಕೆ ನಾನು ನಮಸ್ಕರಿಸುತ್ತೇನೆ. ಕೂಡಂಕುಳಂ ಅಣು ವಿದ್ಯುತ್ ಘಟಕದ ಉದ್ಘಾಟನೆಯು ಭಾರತ- ರಷ್ಯಾ ಬಾಂಧವ್ಯಕ್ಕೆ ಇನ್ನೊಂದು ಕೊಂಡಿಯಾಗಲಿದೆ ಎಂದು ಪ್ರಧಾನಿ ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.