ರಾಷ್ಟ್ರೀಯ ಸ್ಮಾರಕಗಳ ಎದುರು ನಿಂತು ಸೆಲ್ಫಿ ಕ್ಲಿಕ್ಕಿಸುವುದಕ್ಕೆ ನಿರ್ಬಂಧ

ರಾಷ್ಟ್ರೀಯ ಸ್ಮಾರಕಗಳ ಎದುರು ನಿಂತು ಸೆಲ್ಫಿ ಕ್ಲಿಕ್ಕಿಸುವುದಕ್ಕೆ ನಿರ್ಬಂಧ ವಿಧಿಸಿರುವ ಕೇಂದ್ರ ಪ್ರವಾಸೋದ್ಯಮ ಸಚಿವಾಲಯ, ರಾಜ್ಯ ಸರ್ಕಾರಗಳಿಗೂ ಈ ಕುರಿತು ಸೂಚನೆ
ರಾಷ್ಟ್ರೀಯ ಸ್ಮಾರಕಗಳ ಎದುರು ನಿಂತು ಸೆಲ್ಫಿ ಕ್ಲಿಕ್ಕಿಸುವುದಕ್ಕೆ ನಿರ್ಬಂಧ
ರಾಷ್ಟ್ರೀಯ ಸ್ಮಾರಕಗಳ ಎದುರು ನಿಂತು ಸೆಲ್ಫಿ ಕ್ಲಿಕ್ಕಿಸುವುದಕ್ಕೆ ನಿರ್ಬಂಧ

ನವದೆಹಲಿ: ರಾಷ್ಟ್ರೀಯ ಸ್ಮಾರಕಗಳ ಎದುರು ನಿಂತು ಸೆಲ್ಫಿ ಕ್ಲಿಕ್ಕಿಸುವುದಕ್ಕೆ ನಿರ್ಬಂಧ ವಿಧಿಸಿರುವ ಕೇಂದ್ರ ಪ್ರವಾಸೋದ್ಯಮ ಸಚಿವಾಲಯ, ರಾಜ್ಯ ಸರ್ಕಾರಗಳಿಗೂ ಈ ಕುರಿತು ಸೂಚನೆ ಹಾಗೂ ಮಾರ್ಗಸೂಚಿಗಳನ್ನು ಕಳಿಸಿದೆ.

ಆಗಸ್ಟ್ 12 ರಿಂದ 18 ವರೆಗೆ ನಿರ್ಬಂಧ ಜಾರಿಯಲ್ಲಿರಲಿದ್ದು, ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ  ಭದ್ರತಾ ದೃಷ್ಟಿಯಿಂದ ಪ್ರವಾಸೋದ್ಯಮ ಇಲಾಖೆ ಈ ಆದೇಶ ಹೊರಡಿಸಿದೆ. ಸ್ವಾತಂತ್ರ್ಯ ದಿನಾಚರಣೆಯ ವೇಳೆ ಭಯೋತ್ಪಾದಕರು ದಾಳಿ ನಡೆಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೆಹಲಿಯಲ್ಲೂ ಸ್ವಾತಂತ್ರ್ಯ ದಿನಾಚರಣೆಗೆ ಭರದ ಸಿದ್ಧತೆ ನಡೆಯುತ್ತಿದ್ದು, ಕೆಂಪುಕೋಟೆ ಸುತ್ತಾ 3,140 ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com