ದಲಿತರ ಮೇಲಿನ ದೌರ್ಜನ್ಯದ ಬಗ್ಗೆ ಲೋಕಸಭೆಯಲ್ಲಿ ನಡೆಯಲಿದೆ ಚರ್ಚೆ

ದೇಶಾದ್ಯಂತ ಚರ್ಚೆಯಾಗುತ್ತಿರುವ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳ ಬಗ್ಗೆ ಆಗಸ್ಟ್ 11 ರಂದು ಲೋಕಸಭೆಯಲ್ಲಿ ಚರ್ಚೆ ನಡೆಯಲಿದೆ.
ದಲಿತರ ಮೇಲಿನ ದೌರ್ಜನ್ಯದ ಬಗ್ಗೆ ಇಂದು ಲೋಕಸಭೆಯಲ್ಲಿ ಚರ್ಚೆ
ದಲಿತರ ಮೇಲಿನ ದೌರ್ಜನ್ಯದ ಬಗ್ಗೆ ಇಂದು ಲೋಕಸಭೆಯಲ್ಲಿ ಚರ್ಚೆ

ನವದೆಹಲಿ: ದೇಶಾದ್ಯಂತ ಚರ್ಚೆಯಾಗುತ್ತಿರುವ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳ ಬಗ್ಗೆ ಆಗಸ್ಟ್ 11 ರಂದು ಲೋಕಸಭೆಯಲ್ಲಿ ಚರ್ಚೆ ನಡೆಯಲಿದೆ.

ಲೋಕಸಭೆಯಲ್ಲಿ ಈಗಾಗಲೇ ಕಾಂಗ್ರೆಸ್ ನ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಈ ವಿಷಯವನ್ನು ಪ್ರಸ್ತಾಪಿಸಿದ್ದು, ಲೋಕಸಭಾ ಸ್ಪೀಕರ್ ಈ ವಿಷಯದಲ್ಲಿ ಮಧ್ಯಪ್ರವೇಶ ಮಾಡಬೇಕೆಂದು ಕೋರಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಚರ್ಚಿಸುವುದಕ್ಕೆ ಸರ್ಕಾರ ಹಿಂದೇಟು ಹಾಕುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು.

ಗೋರಕ್ಷಣೆಯ ಕಾರಣದಿಂದ ದಲಿತರ ಮೇಲೆ ಹಲ್ಲೆ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕವಾಗಿ ಸ್ವಯಂ ಘೋಷಿಸಿದ ಗೋರಕ್ಷಕರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ದಲಿತರ ಮೇಲೆ ದೌರ್ಜನ್ಯ ನಡೆಯುತ್ತಿರುವುದರ ಬಗ್ಗೆ  ಲೋಕಸಭೆಯಲ್ಲಿ ಚರ್ಚೆ ನಡೆಸಲು ತೀರ್ಮಾನಿಸಲಾಗಿದ್ದು, ಆಗಸ್ಟ್.11 ರ ಕಲಾಪದಲ್ಲಿ ಚರ್ಚೆ ನಡೆಯಲಿದೆ. ದಲಿತರ ಮೇಲೆ ಹಲ್ಲೆಗೆ ಕಾರಣವಾಗುತ್ತಿರುವ ಸ್ವಯಂ ಘೋಷಿತ ಗೋ ರಕ್ಷಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಈಗಾಗಲೇ ಕೇಂದ್ರ ಸರ್ಕಾರ ಎಲ್ಲಾ ರಾಜ್ಯ ಸರ್ಕಾರಗಳಿಗೂ ಸೂಚನೆ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com