ದೇಶ

24 ಗಂಟೆಯೊಳಗೆ ಅಬ್ದುಲ್ ಬಸಿತ್'ನನ್ನು ಇಸ್ಲಾಮಾಬಾದ್'ಗೆ ಕಳುಹಿಸಿ: ಶಿವಸೇನೆ

ಕಾಶ್ಮೀರ ಕುರಿತಂತೆ ಪ್ರಚೋದನಾಕಾರಿಯಾಗಿ ಹೇಳಿಕೆ ನೀಡುತ್ತಿರುವ ಭಾರತದಲ್ಲಿನ ಪಾಕಿಸ್ತಾನದ ಹೈಕಮಿಷನರ್‌ ಅಬ್ದುಲ್ ಬಸಿತ್ ನನ್ನು 24 ಗಂಟೆಯೊಳಗಾಗಿ ಇಸ್ಲಾಮಾಬಾದ್'ಗೆ...

24 ಗಂಟೆಯೊಳಗೆ ಅಬ್ದುಲ್ ಬಸಿತ್'ನನ್ನು ಇಸ್ಲಾಮಾಬಾದ್'ಗೆ ಕಳುಹಿಸಿ: ಶಿವಸೇನೆ
ಶಿವಸೇನೆ ನಾಯಕ ಸಂಜಯ್ ರಾವತ್ (ಸಂಗ್ರಹ ಚಿತ್ರ)
Published On :

ಮುಂಬೈ: ಕಾಶ್ಮೀರ ಕುರಿತಂತೆ ಪ್ರಚೋದನಾಕಾರಿಯಾಗಿ ಹೇಳಿಕೆ ನೀಡುತ್ತಿರುವ ಭಾರತದಲ್ಲಿನ ಪಾಕಿಸ್ತಾನದ ಹೈಕಮಿಷನರ್‌ ಅಬ್ದುಲ್ ಬಸಿತ್ ನನ್ನು 24 ಗಂಟೆಯೊಳಗಾಗಿ ಇಸ್ಲಾಮಾಬಾದ್'ಗೆ ಕಳುಹಿಸಿ ಎಂದು ಶಿವಸೇನೆ ಭಾನುವಾರ ಹೇಳಿದೆ.

ಈ ಕುರಿತಂತೆ ಮಾತನಾಡಿರುವ ಶಿವಸೇನೆ ನಾಯಕ ಸಂಜಯ್ ರಾವತ್ ಅವರು, ನವದೆಹಲಿ ಹಾಗೂ ಮುಂಬೈ ನಲ್ಲಿರುವ ಪಾಕಿಸ್ತಾನ ಹೈ ಕಮಿಷನರ್ ಕಚೇರಿಯನ್ನು ಮುಚ್ಚಬೇಕಿದೆ. ದೆಹಲಿಯಲ್ಲಿದ್ದುಕೊಂಡು ಭಾರತದ ವಿರುದ್ಧವೇ ಅಬ್ದುಲ್ ಬಸಿತ್ ಪ್ರಚೋದನಾಕಾರಿ ಹೇಳಿಕೆಯನ್ನು ನೀಡುತ್ತಿದ್ದಾರೆ. ಇಂತಹ ವ್ಯಕ್ತಿಯನ್ನು 24 ಗಂಟೆಯೊಳಗಾಗಿ ಇಸ್ಲಾಮಾಬಾದ್ ಗೆ ಕಳುಹಿಸಬೇಕು ಎಂದು ಹೇಳಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆಗೆ ಒಂದು ದಿನ ಬಾಕಿ ಇರುವಾಗಲೇ ಅಬ್ದುಲ್ ಬಸಿತ್ ಅವರು ಈ ರೀತಿಯ ಪ್ರಚೋದನಾಕಾರಿ ಹೇಳಿಕೆಯನ್ನು ನೀಡಿದ್ದಾರೆ. ಬಸಿತ್ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ನನಗೆ ನಂಬಿಕೆಯಿದೆ.

ಪಾಕಿಸ್ತಾನ ಯಾವ ಕಾರಣಕ್ಕೆ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಿದೆ ಎಂಬುದು ನನಗೆ ತಿಳಿಯುತ್ತಿಲ್ಲ. ದೇಶದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಆದರೆ, ಪಾಕಿಸ್ತಾನವೊಂದು ದೇಶವೇ ಅಲ್ಲ. ಅದೊಂದು ಭಯೋತ್ಪಾದನಾ ಚಟುವಟಿಕೆ ಕೇಂದ್ರವಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.