ಕಾಶ್ಮೀರಿ ಸಹೋದರರೊಂದಿಗೆ ಸೇರಿ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ತ್ರಿವರ್ಣ ಧ್ವಜ ಹಾರಿಸುತ್ತೇವೆ: ಭಾರತ

ಕಾಶ್ಮೀರ ಕುರಿತಂತೆ ಪಾಕಿಸ್ತಾನ ಆಕ್ರೋಶ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಇದೀಗ ಭಾರತ ಕೂಡ ಸಿಡಿದೆದ್ದಿದ್ದು, ಕಾಶ್ಮೀರಿ ಸಹೋದರರೊಂದಿಗೆ ಸೇರಿ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ...
ಭಾರತ
ಭಾರತ
Updated on: 

ನವದೆಹಲಿ: ಕಾಶ್ಮೀರ ಕುರಿತಂತೆ ಪಾಕಿಸ್ತಾನ ಆಕ್ರೋಶ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಇದೀಗ ಭಾರತ ಕೂಡ ಸಿಡಿದೆದ್ದಿದ್ದು, ಕಾಶ್ಮೀರಿ ಸಹೋದರರೊಂದಿಗೆ ಸೇರಿ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ತ್ರಿವರ್ಣ ಧ್ವಜ ಹಾರಿಸಲು ನಿರ್ಧರಿಸಿದೆ.

ಈ ಕುರಿತಂತೆ ಮಾತನಾಡಿರುವ ಪ್ರಧಾನಿ ಕಚೇರಿ ಸಚಿವ ಜಿತೇಂದ್ರ ಸಿಂಗ್ ಅವರು, ಗಿಲ್ಲಿಟ್ ಮತ್ತು ಬಲ್ಟಿಸ್ತಾನ್ ಸೇರಿದಂತೆ ಆಕ್ರಮಿತ ಕಾಶ್ಮೀರ ಭಾರತದ ಅವಿಭಾಜ್ಯ ಅಂಗ. ಕಾಶ್ಮೀರಿ ಸಹೋದರರೊಂದಿಗೆ ಕೈ ಜೋಡಿಸುವುದು ಭಾರತದ ನೈತಿಕ ಹಾಗೂ ರಾಷ್ಟ್ರೀಯ ಜವಾಬ್ದಾರಿಯಾಗಿರುತ್ತದೆ ಎಂದು ಹೇಳಿದ್ದಾರೆ.

ವಿಶ್ವದ ಗಮನ ಸೆಳೆಯುವ ಸಲುವಾಗಿ ಕಾಶ್ಮೀರದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಮಾಡಲಾಗುತ್ತಿದೆ. ಪಾಕ್ ಆಕ್ರಮಿಕ ಕಾಶ್ಮೀರದಲ್ಲಿ ತ್ರಿವರ್ಣ ಧ್ವಜ ಹಾರಿಸಬೇಕಿದೆ. ಸ್ವಾತಂತ್ರ್ಯ ದಿನದಂದು ಮುಜಾಫರ್ ಬಾದ್ ನಲ್ಲಿ ತ್ರಿವರ್ಣ ಧ್ವಜ ಹಾರಿಸಲಾಗುತ್ತದೆ.

ಒಂದು ವೇಳೆ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ತ್ರಿವರ್ಣ ಧ್ವಜ ಹಾರಿಸುವಲ್ಲಿ ಯಶಸ್ವಿಯಾಗಿದ್ದೇ ಆದರೆ, ವಿದೇಶಾಂಗ ಸಚಿವ ಕಿರಣ್ ರಿಜಿಜು ನೇತೃತ್ವದಲ್ಲಿ ಬಿಜೆಪಿಯು ಜಮ್ಮು ಮತ್ತು ಕಾಶ್ಮೀರದಲ್ಲಿ ತಿರಂಗ ಯಾತ್ರೆಯನ್ನು ಆರಂಭಿಸುತ್ತದೆ. ಸಾಮಾಜಿಕ ಸಾಮರಸ್ಯ ಮತ್ತು ಐಕ್ಯತೆ ಸಂಕೇತವಾಗಿ ಆಗಸ್ಟ್ 15-22ರವರೆಗೂ ಬಿಜೆಪಿ ತಿರಂಗ ಯಾತ್ರೆಯನ್ನು ಆರಂಭಿಸುತ್ತದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com