ಕಾಶ್ಮೀರದಲ್ಲಿ ಹಿಂಸಾಚಾರ (ಸಂಗ್ರಹ ಚಿತ್ರ)
ಕಾಶ್ಮೀರದಲ್ಲಿ ಹಿಂಸಾಚಾರ (ಸಂಗ್ರಹ ಚಿತ್ರ)

ಕಾಶ್ಮೀರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 5 ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ

ಕಾಶ್ಮೀರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಗಲಭೆ ಪೀಡಿತ ಬದಗಾಮ್ ಜಿಲ್ಲೆಯಲ್ಲಿ ಪ್ರತಿಭಟನಾ ನಿರತರನ್ನು ನಿಯಂತ್ರಿಸುವ ಸಲುವಾಗಿ ಸೇನಾ ಸಿಬ್ಬಂದಿ ಸಿಡಿಸಿದ ಗುಂಡಿನ ದಾಳಿಗೆ 4 ಮಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ.

ಶ್ರೀನಗರ: ಕಾಶ್ಮೀರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಗಲಭೆ ಪೀಡಿತ ಬದಗಾಮ್ ಜಿಲ್ಲೆಯಲ್ಲಿ ಪ್ರತಿಭಟನಾ ನಿರತರನ್ನು ನಿಯಂತ್ರಿಸುವ ಸಲುವಾಗಿ ಸೇನಾ ಸಿಬ್ಬಂದಿ ಸಿಡಿಸಿದ ಗುಂಡಿನ  ದಾಳಿಗೆ 5 ಮಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ.

ಇಂದು ಸಾವನ್ನಪ್ಪಿದ ನಾಲ್ವರನ್ನು ಸೇರಿಸಿದಂತೆ ಉಗ್ರ ಬುರ್ಹಾನ್ ವನಿ ಬಳಿಕ ಕಾಶ್ಮೀರದಲ್ಲಿ ನಡೆದ ಹಿಂಸಾಚಾರದಲ್ಲಿ ಈ ವರೆಗೂ ಸಾವನ್ನಪ್ಪಿದವರ ಸಂಖ್ಯೆ 64ಕ್ಕೇರಿದೆ. ಇಂದು ಬದಗಾಮ್  ಜಿಲ್ಲೆಯ ಮಗಮ್ ಪ್ರದೇಶದಲ್ಲಿ ಸೇನಾ ಸಿಬ್ಬಂದಿಗಳತ್ತ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದು, ಈ ವೇಳೆ ಸೈನಿಕರು ಅವರನ್ನು ನಿಯಂತ್ರಿಸಲು ಲಾಠಿಚಾರ್ಜ್ ನಡೆಸಿದಾಗ ಪರಿಸ್ಥಿತಿ  ವಿಕೋಪಕ್ಕೆ ತಿರುಗಿದೆ. ನೋಡ ನೋಡುತ್ತಿದ್ದಂತೆಯೇ ಪ್ರತಿಭಟನಾಕಾರರು ಸೇನಾ ಸಿಬ್ಬಂದಿಗಳ ಮೇಲೆ ಕಲ್ಲೂ ತೂರಾಟ ಹೆಚ್ಚಿಸಿದಾಗ ಬೇರೆ ದಾರಿಯಿಲ್ಲದೇ ಗುಂಡು ಹಾರಿಸಲಾಗಿದೆ ಎಂದು  ಹಿರಿಯ ಸೇನಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಕರಣದಲ್ಲಿ ಈ ವರೆಗೂ 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸೇನಾ ಸಿಬ್ಬಂದಿಗಳೇ ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಇನ್ನು ಇತ್ತೀಚೆಗೆ ನಡೆದ ಕಾಶ್ಮೀರ ಹಿಂಸಾಚಾರದಲ್ಲಿ ಹಲವು ದುಷ್ಕರ್ಮಿಗಳು ಸೇನಾ ಸಿಬ್ಬಂದಿಗಳ ವಾಹನಗಳ ಮೇಲೆ ದಾಳಿ ನಡೆಸಿ ಅವರ ಕೈಯಲ್ಲಿದ್ದ ಶಸ್ತ್ರಾಸ್ತ್ರಗಳನ್ನು ಕಸಿದಿದ್ದಾರೆ. ಇದು  ಭಾರತೀಯ ಸೇನೆ ಆತಂಕಕ್ಕೆ ಕಾರಣವಾಗಿದ್ದು, ಶಾಸ್ತ್ರಾಸ್ತ್ರ ಕಸಿದ ದುಷ್ಕರ್ಮಿಗಳು ಸ್ಥಳೀಯ ನಿವಾಸಿಗಳೇ ಅಥವಾ ಉಗ್ರರೇ ಎಂಬುದರ ಕುರಿತು ತನಿಖೆ ನಡೆಸುತ್ತಿದ್ದಾರೆ. ಅಲ್ಲದೆ ದುಷ್ಕರ್ಮಿಗಳ  ಬಂಧನಕ್ಕೆ ಸ್ಥಳೀಯ ಪೊಲೀಸರ ನೆರವಿನಿಂದ ಕಾರ್ಯಾಚರಣೆ ಆರಂಭಿಸಿದ್ದಾರೆ.

ಅಂತೆಯೇ ಕಳೆದ ಐದು ವಾರಗಳಿಂದ ಕಾಶ್ಮೀರದಲ್ಲಿ ಹೇರಲಾಗಿದ್ದ ನಿಷೇಧಾಜ್ಞೆಯನ್ನು ಈ ಹಿಂದೆ ಕೆಲ ಜಿಲ್ಲೆಗಳಲ್ಲಿ ಹಿಂದಕ್ಕೆ ಪಡೆಯಲಾಗಿತ್ತಾದರೂ, ಇದೀಗ ಮತ್ತೆ ಹಿಂಸಾಚಾರ  ಭುಗಿಲೆದ್ದಿರುವುದರಿಂದ ಮತ್ತೆ ನಿಷೇಧಾಜ್ಞೆಯನ್ನು ಮತ್ತಷ್ಟು ಜಿಲ್ಲೆಗಳಿಗೆ ವಿಸ್ತರಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

Related Stories

No stories found.

Advertisement

X
Kannada Prabha
www.kannadaprabha.com