
ಗಾಜಿಯಾಬಾದ್: ಸ್ವಾತಂತ್ರ್ಯೋತ್ಸವ ಆಚರಣೆ ಹಿನ್ನೆಲೆಯಲ್ಲಿ ಗಾಜಿಯಾಬಾದ್ ನಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ತಿರಂಗ ಯಾತ್ರಾದಲ್ಲಿ ವಿದೇಶಾಂಗ ರಾಜ್ಯ ಸಚಿವ ವಿಕೆ ಸಿಂಗ್ ಹೆಲ್ಮಟ್ ಧರಿಸದೇ ಸ್ಕೂಟರ್ ಚಲಾಯಿಸಿ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.
ಸಚಿವರು ಸಂಚಾರಿ ನಿಯಮ ಉಲ್ಲಂಘನೆ ಮಾಡಿರುವುದಕ್ಕೆ ಜನಸಾಮಾನ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಕೆ ಸಿಂಗ್ ಅವರು ಸ್ಕೂಟರ್ ನಲ್ಲಿ ಹೆಲ್ಮೆಟ್ ಧರಿಸದೇ ಹಿಂಬದಿಯಲ್ಲಿ ಇನ್ನೊಬ್ಬರನ್ನು ಕೂರಿಸಿಕೊಂಡು ಓಡಿಸಿದ್ದಾರೆ.
ಈ ಮೆರವಣಿಗೆ ವೇಳೆ ಸಿಂಗ್ ಜತೆ ಸಾಕಷ್ಟು ಬಿಜೆಪಿ ಕಾರ್ಯಕರ್ತರೂ ಪಾಲ್ಗೊಂಡಿದ್ದರು. ಸ್ಥಳದಲ್ಲಿ ಪೊಲೀಸರು ಇದ್ದರೂ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಾಗಿಲ್ಲ.
Advertisement