ಮೊಸರು ಕುಡಿಕೆ(ದಹಿ ಹಂಡಿ) ಸ್ಪರ್ಧೆಯಲ್ಲಿ ಅಪ್ರಾಪ್ತರು ಭಾಗವಹಿಸುವಂತಿಲ್ಲ: ಸುಪ್ರೀಂ ಕೋರ್ಟ್

ಶ್ರೀ ಕೃಷ್ಣ ಜನ್ಮಾಷ್ಟಮಿ ಸಂದರ್ಭದಲ್ಲಿ ನಡೆಯುವ ಮೊಸರು ಕುಡಿಕೆ ಕಾರ್ಯಕ್ರಮದಲ್ಲಿ ಅಪ್ರಾಪ್ತರು ಭಾಗವಹಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ .,..
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಶ್ರೀ ಕೃಷ್ಣ ಜನ್ಮಾಷ್ಟಮಿ ಸಂದರ್ಭದಲ್ಲಿ ನಡೆಯುವ ಮೊಸರು ಕುಡಿಕೆ ಕಾರ್ಯಕ್ರಮದಲ್ಲಿ ಅಪ್ರಾಪ್ತರು ಭಾಗವಹಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಮಹಾರಾಷ್ಟ್ರ ಸರ್ಕಾರ ಸಲ್ಲಿಸಿದ ಅರ್ಜಿ ವಿಚಾರಣೆ ಪೂರ್ಣಗೊಳಿಸಿದ ಕೋರ್ಟ್, ಈ ದಹಿ ಹಂಡಿಯಲ್ಲಿ 18 ವರ್ಷದ ಒಳಗಿನ ಮಕ್ಕಳು ಭಾಗವಹಿಸಬಾರದು ಎಂದು ಆದೇಶದಲ್ಲಿ ತಿಳಿಸಿದೆ

ಶ್ರೀ ಕೃಷ್ಣ ಜನ್ಮಾಷ್ಟಮಿ ಸಂದರ್ಭದಲ್ಲಿ ಮೊಸರು ಕುಡಿಕೆ (ದಹಿ ಹಂಡಿ) ಕಾರ್ಯಕ್ರಮದಲ್ಲಿ ಮಾನವ ಪಿರಮಿಡ್‍ನ ಎತ್ತರ 20 ಅಡಿಗಿಂತ ಎತ್ತರ ಇರಬಾರದು ಎಂದು ಬಾಂಬೆ ಹೈಕೋರ್ಟ್ ನೀಡಿದ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.

ಮಾನವ ಪಿರಮಿಡ್ ಎತ್ತರ 20 ಅಡಿ ಮೀರುವಂತಿಲ್ಲ ಮತ್ತು 18 ವರ್ಷದ ಒಳಗಿನ ಮಕ್ಕಳು ಭಾಗವಹಿಸುವಂತಿಲ್ಲ ಎಂದು ಬಾಂಬೆ ಹೈಕೋರ್ಟ್ 2014ರಲ್ಲಿ ಆದೇಶ ನೀಡಿತ್ತು. ಸರ್ಕಾರ ಸುತ್ತೋಲೆ ಹೊರಡಿಸಿ ಜನರಿಗೆ ಮಾಹಿತಿ ತಿಳಿಸಬೇಕೆಂದು ಸೂಚಿಸಿತ್ತು.

ಆದರೆ ಸಾಮಾಜಿಕ ಕಾರ್ಯಕರ್ತೆ ವಕೀಲೆ ಸ್ವಾತಿ ಪಾಟೇಲ್ ಬಾಂಬೆ ಹೈಕೋರ್ಟ್ ಆದೇಶವನ್ನು ಮಹಾರಾಷ್ಟ್ರ ಸರ್ಕಾರ ಪಾಲಿಸುತ್ತಿಲ್ಲ ಎಂದು ಇದೇ ಜುಲೈನಲ್ಲಿ ಪಿಐಎಲ್ ಹಾಕಿದ್ದರು. ಈ ಅರ್ಜಿಯ ವಿಚಾರಣೆ ವೇಳೆ ಹೈಕೋರ್ಟ್ ಮಹಾರಾಷ್ಟ್ರ ಸರ್ಕಾರಕ್ಕೆ ಮಾನವ ಪಿರಮಿಡ್ ಎತ್ತರದ ಬಗ್ಗೆ ಸುಪ್ರೀಂಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿ ಸ್ಪಷ್ಟನೆ ಪಡೆಯಬೇಕೆಂದು ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆ ನಡೆಸಿದ ಸುಪ್ರಿಂಕೋರ್ಟ್ ತೀರ್ಪು ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com