

ನವದೆಹಲಿ: ಕಳ್ಳನನ್ನು ಹಿಡಿಯಲು ಬೆನ್ನಟ್ಟಿ ಹೋದ ಪೇದೆಯನ್ನು ದುಷ್ಕರ್ಮಿಗಳು ಗುಂಡು ಹಾರಿಸಿ ಕೊಂದಿರುವ ಘಟನೆ ದೆಹಲಿಯ ಶಹಬಾದ್ ಪ್ರದೇಶದಲ್ಲಿ ಸಂಭವಿಸಿದೆ.
ಶುಕ್ರವಾರ ರಾತ್ರಿ ಮನೆಗೆ ತೆರಳುತ್ತಿದ್ದ ಮಹಿಳೆಯ ಮೇಲೆ ಮೂವರು ಆಗಂತುಕರು ದಾಳಿ ನಡೆಸಿ ಬ್ಯಾಗ್ ದೋಚಿ ಪರಾರಿಯಾಗಿದ್ದಾರೆ.
ಈ ವೇಳೆ ಬವನಾ ಪೊಲೀಸ್ ಚೌಕಿನಲ್ಲಿ ಕರ್ತವ್ಯನಿರತರಾಗಿದ್ದ ಪೇದೆಗೆ ವಿಷಯ ತಿಳಿಯುತ್ತಿದ್ದಂತೆ ಕಳ್ಳರನ್ನು ಹಿಡಿಯುವ ಸಲುವಾಗಿ ಹಿಂಬಾಲಿಸಿದಾಗ ಕಳ್ಳರು ಗುಂಡು ಹಾರಿಸಿ ಪರಾರಿಯಾಗಿದ್ದಾರೆ.