ಮಧ್ಯಪ್ರದೇಶದಲ್ಲಿ ಭಾರಿ ಮಳೆ, ಮನೆ ಕುಸಿದು ಏಳು ಮಂದಿ ಸಾವು

ಮಧ್ಯಪ್ರದೇಶದಲ್ಲಿ ಭಾರಿ ಮಳೆಯಿಂದಾಗಿ ಸಾಗರದ ರಹತ್ ಗಢ ಪ್ರದೇಶದಲ್ಲಿ ಮನೆಯೊಂದು ಕುಸಿದುಬಿದ್ದು ಏಳು ಮಂದಿ ಮೃತಪಟ್ಟಿರುವ...
ಕುಸಿದು ಬಿದ್ದ ಮನೆ
ಕುಸಿದು ಬಿದ್ದ ಮನೆ
ಸಾಗರ್(ಮಧ್ಯಪ್ರದೇಶ): ಮಧ್ಯಪ್ರದೇಶದಲ್ಲಿ ಭಾರಿ ಮಳೆಯಿಂದಾಗಿ ಸಾಗರದ ರಹತ್ ಗಢ ಪ್ರದೇಶದಲ್ಲಿ ಮನೆಯೊಂದು ಕುಸಿದುಬಿದ್ದ ಪರಿಣಾಮ ಓರ್ವ ಮಹಿಳೆ ಸೇರಿದಂತೆ ಏಳು ಮಂದಿ ಮೃತಪಟ್ಟಿರುವ ದಾರುಣ ಘಟನೆ ಕಳೆದ ರಾತ್ರಿ ನಡೆದಿದೆ.
ನಿನ್ನೆ ರಾತ್ರಿ 2 ಗಂಟೆಯ ಸುಮಾರಿಗೆ ಸಾಗರ್ ಜಿಲ್ಲೆಯ ಬನ್ನೆ ಘಾಟ್ ಪ್ರದೇಶದಲ್ಲಿರುವ ಕರಕುಶಲಕರ್ಮಿಯೊಬ್ಬರ ಮನೆ ಕುಸಿದು ಬಿದ್ದಿದ್ದು, ಘಟನೆಯಲ್ಲಿ ಕನಿಷ್ಠ ಏಳು ಮಂದಿ ಮೃತಪಟ್ಟಿದ್ದಾರೆ ಮತ್ತು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರು ರಕ್ಷಣಾ ಕಾರ್ಯ ಮುಂದುವರೆಸಿದ್ದಾರೆ.
ಭಾರೀ ಮಳೆಯಿಂದಾಗಿ ತತ್ತರಗೊಂಡಿರುವ ಮಧ್ಯಪ್ರದೇಶದಲ್ಲಿ ಇದೀಗ ಪ್ರವಾಹ ಭೀತಿ ಎದುರಾಗಿದ್ದು, ಪರಿಸ್ಥಿತಿ ಅವಲೋಕನಕ್ಕಾಗಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಇಂದು ತುರ್ತುಸಭೆ ಕರೆದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com