ಮೋದಿ ವಿರುದ್ಧ ವಾಗ್ದಾಳಿ: ಮಮತಾ ಬೆನ್ನಿಗೆ ನಿಂತ ಕಾಂಗ್ರೆಸ್

ಕೇಂದ್ರದಲ್ಲಿ ಮೋದಿ ಸರ್ಕಾರ ದೇಶದ ಒಕ್ಕೂಟ ವ್ಯವಸ್ಥೆಯನ್ನು ಹಾಳುಮಾಡುತ್ತಿದೆ ಎಂದು ಹೇಳಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಬೆನ್ನಿಗೆ ಇದೀಗ...
ಕಾಂಗ್ರೆಸ್ ನಾಯಕ ಸಂದೀಪ್ ದೀಕ್ಷಿತ್
ಕಾಂಗ್ರೆಸ್ ನಾಯಕ ಸಂದೀಪ್ ದೀಕ್ಷಿತ್

ನವದೆಹಲಿ: ಕೇಂದ್ರದಲ್ಲಿ ಮೋದಿ ಸರ್ಕಾರ ದೇಶದ ಒಕ್ಕೂಟ ವ್ಯವಸ್ಥೆಯನ್ನು ಹಾಳುಮಾಡುತ್ತಿದೆ ಎಂದು ಹೇಳಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಬೆನ್ನಿಗೆ ಇದೀಗ ಕಾಂಗ್ರೆಸ್ ನಿಂತಿದ್ದು, ಫ್ಯಾಸಿಸ್ಟ್ ಮೋದಿಗೆ ಪ್ರಜಾಪ್ರಭುತ್ವದ ಮೇಲೆ ನಂಬಿಕೆಯಿಲ್ಲ ಎಂದು ಹೇಳಿದೆ.

ಮಮತಾ ಅವರ ಹೇಳಿಕೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕ ಸಂದೀಪ್ ದೀಕ್ಷಿತ್ ಅವರು, ನರೇಂದ್ರ ಮೋದಿಯವರು ಮುಖ್ಯಮಂತ್ರಿಯಾಗಿದ್ದಾಗ ಅವರಿಗೆ ದೇಶದ ಬಗ್ಗೆ ಕಾಳಜಿಯೇ ಇರಲಿಲ್ಲ. ಪ್ರಧಾನಮಂತ್ರಿಯಾದ ಮೇಲೆ ರಾಜ್ಯದ ಮೇಲೆ ಕಾಳಜಿ ಇಲ್ಲದಾಗಿದೆ. ಮೋದಿಯವರು ಫ್ಯಾಸಿಸ್ಟ್ ನಾಯಕರೆಂಬುದಕ್ಕೆ ಇದೊಂದು ಉದಾಹರಣೆಯಾಗಿದೆ ಎಂದು ಹೇಳಿದ್ದಾರೆ.

ಮಮತಾ ಬ್ಯಾನರ್ಜಿಯವರು ಈ ಸತ್ಯಾಂಶವನ್ನು ಅರ್ಥ ಮಾಡಿಕೊಂಡಿರುವುದು ಒಳ್ಳೆಯಾಗಿದೆ. ಮೋದಿಯವರಿಗೆ  ಪ್ರಜಾಪ್ರಭುತ್ವದ ಮೇಲೆ ನಂಬಿಕೆಯಿಲ್ಲ. ಕೇವಲ ಅವರ ಸರ್ಕಾರವನ್ನು ಮುಂದಕ್ಕೆ ತರುವುದಷ್ಟೇ ಅವರಿಗೆ ಮುಖ್ಯವಾಗಿದೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com