
ಆಗ್ರಾ: ಮುಸ್ಲಿಂ ಸಮುದಾಯ ಜನಸಂಖ್ಯೆಯನ್ನ ಹೆಚ್ಚಿಸಿಕೊಳ್ಳಬಹುದಾದರೇ, ಹಿಂದೂಗಳು ತಮ್ಮ ಜನ ಸಂಖ್ಯೆಯನ್ನು ಏಕೆ ಹೆಚ್ಚಿಸಿಕೊಳ್ಳಬಾರದು ಎಂದು ಪ್ರಶ್ನಿಸಿರುವ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹಿಂದೂ ಗಳು ಹೆಚ್ಚು ಮಕ್ಕಳನ್ನು ಹುಟ್ಟಿಸಬೇಕು ಎಂದು ಕರೆ ನೀಡಿದ್ದಾರೆ.
ದೇಶದಲ್ಲಿ ಹಿಂದೂಗಳ ಸಂಖ್ಯೆ ಕಡಿಮೆಯಾಗುತ್ತಿರುವುದು ಶೋಚನೀಯ ಸಂಗತಿಯಾಗಿದೆ. ಹೀಗಾಗಿ ಹಿಂದುಗಳು ಹೆಚ್ಚೆಚ್ಚು ಮಕ್ಕಳನ್ನು ಮಾಡಿಕೊಳ್ಳಬೇಕು ಎಂದು ಕರೆ ನೀಡಿದ್ದಾರೆ.
ಹಿಂದೂಗಳು ಹೆಚ್ಚು ಮಕ್ಕಳನ್ನು ಹುಟ್ಟಿಸಬಾರದು ಎಂಬುದಕ್ಕೆ ಯಾವುದೇ ಕಾನೂನಿನ ಅಡ್ಡಿ ಆತಂಕವಿಲ್ಲ ಎಂದು ಅವರು ಹೇಳಿದ್ದಾರೆ. ಇದು ಸರ್ಕಾರದ ಆಡಳಿತಕ್ಕೆ ಸಂಬಂಧಪಟ್ಟ ವಿಚಾರವಲ್ಲ. ಬದಲಿಗೆ ಇದು ಸಮಾಜದ ರಚನೆಗೆ ಸಂಬಂಧಿಸಿದ್ದು. ನಿಮ್ಮ ಬಗ್ಗೆ, ನಿಮ್ಮ ಕುಟುಂಬದ ಬಗ್ಗೆ, ಮತ್ತು ದೇಶದ ಹಿತಾಸಕ್ತಿ ಬಗ್ಗೆ ಯೋಚಿಸಿ ಹಿಂದೂಗಳು ಹೆಚ್ಚೆಚ್ಚು ಮಕ್ಕಳನ್ನು ಹುಟ್ಟಿಸಬೇಕು ಎಂದು ಅವರು ಹೇಳಿದ್ದಾರೆ.
Advertisement