ಪ್ರಧಾನಿ ಮೋದಿ ಹೇಳಿಕೆಗೆ ಬೆಂಬಲ: ಬಲೂಚಿಸ್ಥಾನ ಸ್ವಾತಂತ್ರ್ಯ ಹೋರಾಟಗಾರರ ವಿರುದ್ಧ ಪ್ರಕರಣ ದಾಖಲಿಸಿದ ಪಾಕ್

ಬಲೂಚಿಸ್ಥಾನದ ಸ್ವಾತಂತ್ರ್ಯ ಹೋರಾಟಗಾರರಿಗೆ ಪ್ರಧಾನಿ ನರೇಂದ್ರ ಮೋದಿ ಬಹಿರಂಗವಾಗಿ ಬೆಂಬಲ ಘೋಷಿಸಿರುವುದು ಪಾಕಿಸ್ತಾನಕ್ಕೆ ತಲೆನೋವಾಗಿ ಪರಿಣಮಿಸಿದೆ.
ನರೇಂದ್ರ ಮೋದಿ
ನರೇಂದ್ರ ಮೋದಿ
Updated on: 

ಕ್ವೆಟ್ಟಾ: ಬಲೂಚಿಸ್ಥಾನದ ಸ್ವಾತಂತ್ರ್ಯ ಹೋರಾಟಗಾರರಿಗೆ ಪ್ರಧಾನಿ ನರೇಂದ್ರ ಮೋದಿ ಬಹಿರಂಗವಾಗಿ ಬೆಂಬಲ ಘೋಷಿಸಿರುವುದು ಪಾಕಿಸ್ತಾನಕ್ಕೆ ತಲೆನೋವಾಗಿ ಪರಿಣಮಿಸಿದ್ದು  ಬಲೂಚಿಸ್ಥಾನದ ಪ್ರಮುಖ ಪ್ರತ್ಯೇಕತಾವಾದಿ ನಾಯಕರ ವಿರುದ್ಧ ಪಾಕಿಸ್ತಾನ ಎಫ್ ಐ ಆರ್ ದಾಖಲಿಸಿದೆ. 
ಭಾರತದ ಪ್ರಧಾನಿಯ ಹೇಳಿಕೆಯನ್ನು ಬೆಂಬಲಿಸಿದ್ದಕ್ಕಾಗಿ ಬಲೂಚ್ ಪ್ರತ್ಯೇಕತಾವಾದಿ ನಾಯಕರಾದ ಬ್ರಹಾಂದಗ್ ಬುಗ್ತಿ, ಹರ್ಬಿಯರ್ ಮರ್ರಿ, ಬಾನುಕ್ ಕರೀಮಾ ಬಲೂಚ್ ಎಂಬುವವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಡಾನ್ ನ್ಯೂಸ್ ವರದಿ ಪ್ರಕಟಿಸಿದೆ.

ಬಲೂಚಿಸ್ಥಾನದ ಖುಜ್ದರ್ ಪ್ರಾಂತ್ಯದಲ್ಲಿರುವ ಕೆಲವರು ಬಲೂಚಿಸ್ಥಾನದ ಪ್ರತ್ಯೇಕತಾವಾದಿಗಳ ವಿರುದ್ಧ ದೂರು ನೀಡಿರುವ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪಾಕಿಸ್ತಾನದ ವಿರುದ್ಧ ಸಮರ ಸಾರಿರುವ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.
ದೂರುದಾರರು ತಮ್ಮ ದೂರಿನಲ್ಲಿ ಬಲೂಚಿಸ್ಥಾನದ ಪ್ರತ್ಯೇಕತಾವಾದಿಗಳು ಭಾರತದ ಪ್ರಧಾನಿ ನರೇಂದ್ರ ಮೋದಿ ಬಲೂಚಿಸ್ಥಾನದ ಸ್ವಾತಂತ್ರ್ಯ ಹೋರಾಟದ ಬಗ್ಗೆ ನೀಡಿದ್ದ ಹೇಳಿಕೆಯನ್ನು ಬೆಂಬಲಿಸಿದ್ದರು ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com