

ಜಮ್ಮು: ಕಾಶ್ಮೀರದಲ್ಲಿ ಹಿಂಸಾಚಾರ ಪಸರಿಸುತ್ತಿರುವವರು ಕಾಶ್ಮೀರಿಗಳಾಗಲು ಸಾಧ್ಯವಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರು ಸೋಮವಾರ ಹೇಳಿದ್ದಾರೆ.
ಕಾಶ್ಮೀರದಲ್ಲಿನ ಹಿಂಸಾಚಾರ 45ನೇ ದಿನಕ್ಕೆ ಕಾಲಿಟ್ಟಿದ್ದು, ಈ ಹಿನ್ನೆಲೆಯಲ್ಲಿ ಕಾಶ್ಮೀರದಲ್ಲಿ ಉಂಟಾಗಿರುವ ಪರಿಸ್ಥಿತಿ ಕುರಿತಂತೆ ಮಾತನಾಡಿರುವ ಮುಫ್ತಿಯವರು, ಜಮ್ಮು ಮತ್ತು ಕಾಶ್ಮೀರದಲ್ಲಿ ನೆಲೆಸಿರುವ ಕಾಶ್ಮೀರಿಗರಿಗೆ ಸ್ವಾತಂತ್ರ್ಯವೆಂದರೇನು ಎಂಬುದು ತಿಳಿದಿದೆ. ಬಿಜೆಪಿ ಹಾಗೂ ಪಿಡಿಪಿ ಉತ್ತಮ ಕೆಲಸ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಕೆಲವರು ಕಾಶ್ಮೀರದಲ್ಲಿ ಶಾಂತಿಯನ್ನು ಕದಡಲು ಯತ್ನಿಸುತ್ತಿದ್ದಾರೆಂದು ಹೇಳಿದ್ದಾರೆ.
ಕಾಶ್ಮೀರದಲ್ಲಿ ಉಂಟಾಗಿರುವ ಪರಿಸ್ಥಿತಿ ಕುರಿತಂತೆ ಮೆಹಬೂಬಾ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರೊಂದಿಗೆ ಮಾತುಕತೆ ನಡೆಸಬೇಕೆಂದು ಈ ಹಿಂದೆ ವಿರೋಧ ಪಕ್ಷಗಳು ಆಗ್ರಹಿಸಿದ್ದವು.
ವಿರೋಧ ಪಕ್ಷಗಳ ಆಗ್ರಹಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ನಾವು ಪ್ರಜಾಪ್ರಭುತ್ವ ರಾಷ್ಟ್ರದಲ್ಲಿದ್ದೇವೆ. ಪ್ರಧಾನಿಯವರನ್ನು ಭೇಟಿಯಾಗಿ ಮಾತುಕತೆ ನಡೆಸುವುದರಿಂದ ಸಮಸ್ಯೆ ಬಗೆಹರಿಯುತ್ತದೆ ಎಂದು ಪ್ರತಿಪಕ್ಷಗಳು ಹೇಳಿದರೆ, ಇದು ಉತ್ತಮವಾದುದು ಎಂದು ತಿಳಿಸಿದ್ದಾರೆ.