ಅಭಿವೃದ್ಧಿ ಮಾತ್ರ ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸುವುದಿಲ್ಲ ಎಂಬುದನ್ನು ಪ್ರಧಾನಿ ಒಪ್ಪಿಕೊಂಡಿದ್ದಾರೆ: ಒಮರ್ ಅಬ್ದುಲ್ಲಾ

ಕೇವಲ ಅಭಿವೃದ್ಧಿ ಮಾತ್ರ ಜಮ್ಮು-ಕಾಶ್ಮೀರದ ಸಮಸ್ಯೆಯನ್ನು ಬಗೆಹರಿಸುವುದಿಲ್ಲ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು...
ಜಮ್ಮು-ಕಾಶ್ಮೀರದ ನ್ಯಾಶನಲ್ ಕಾನ್ಫರೆನ್ಸ್ ಅಧ್ಯಕ್ಷ ಒಮರ್ ಅಬ್ದುಲ್ಲಾ ನೇತೃತ್ವದ ನಿಯೋಗ ಸೋಮವಾರ ದೆಹಲಿಯಲ್ಲಿ ಪ್ರಧಾನಿಯನ್ನು ಭೇಟಿ ಮಾಡಿ ಬಂದ ನಂತರ ಮಾಧ್ಯಮಗಳ ಜೊತೆ ಮಾತನಾಡಿದರು.
ಜಮ್ಮು-ಕಾಶ್ಮೀರದ ನ್ಯಾಶನಲ್ ಕಾನ್ಫರೆನ್ಸ್ ಅಧ್ಯಕ್ಷ ಒಮರ್ ಅಬ್ದುಲ್ಲಾ ನೇತೃತ್ವದ ನಿಯೋಗ ಸೋಮವಾರ ದೆಹಲಿಯಲ್ಲಿ ಪ್ರಧಾನಿಯನ್ನು ಭೇಟಿ ಮಾಡಿ ಬಂದ ನಂತರ ಮಾಧ್ಯಮಗಳ ಜೊತೆ ಮಾತನಾಡಿದರು.
Updated on: 
ನವದೆಹಲಿ: ಕೇವಲ ಅಭಿವೃದ್ಧಿ ಮಾತ್ರ ಜಮ್ಮು-ಕಾಶ್ಮೀರದ ಸಮಸ್ಯೆಯನ್ನು ಬಗೆಹರಿಸುವುದಿಲ್ಲ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಒಪ್ಪಿಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ತಿಳಿಸಿದ್ದಾರೆ. ಇಂದು ಅವರ ನೇತೃತ್ವದಲ್ಲಿ ವಿರೋಧ ಪಕ್ಷಗಳ ನಿಯೋಗ ಪ್ರಧಾನಿಯವರನ್ನು ಭೇಟಿ ಮಾಡಿ ರಾಜ್ಯದ ಪರಿಸ್ಥಿತಿ ಕುರಿತು ಚರ್ಚೆ ನಡೆಸಿತ್ತು.
ಅಭಿವೃದ್ಧಿಪರ ಕೆಲಸಗಳು ಮಾತ್ರ ಜಮ್ಮು-ಕಾಶ್ಮೀರದ ಸಮಸ್ಯೆಗಳನ್ನು ಬಗೆಹರಿಸುವುದಿಲ್ಲ ಎಂಬ ವಾಸ್ತವ ಸಂಗತಿಯನ್ನು ಪ್ರಧಾನಿಯವರು ಒಪ್ಪಿಕೊಂಡಿದ್ದಾರೆ ಎಂದು ಒಮರ್ ಅಬ್ದುಲ್ಲಾ ಭೇಟಿ ಮಾಡಿ ಬಂದ ನಂತರ ಮಾಧ್ಯಮದವರಿಗೆ ತಿಳಿಸಿದರು.
ಕಾಶ್ಮೀರದಲ್ಲಿ ಕರ್ಫ್ಯೂ ಇಂದು ಸತತ 45ನೇ ದಿನಕ್ಕೆ ಕಾಲಿಟ್ಟಿದೆ. ರಾಜ್ಯದ ರಾಜಕೀಯ ವಿಷಯಕ್ಕೆ ರಾಜಕೀಯ ಪರಿಹಾರ ಕಂಡುಕೊಳ್ಳುವಂತೆ ನಿಯೋಗ ಪ್ರಧಾನಿಯವರಿಗೆ ಮನವರಿಕೆ ಮಾಡಿದೆ. ಜಮ್ಮು-ಕಾಶ್ಮೀರದ ಸ್ಥಿತಿಗತಿ ಒಂದು ರಾಜಕೀಯ ವಿಷಯವಾಗಿದೆ ಎಂದು ನಾವು ಒತ್ತಿ ಹೇಳಿದ್ದೇವೆ. ಇದಕ್ಕೆ ನಾವು ರಾಜಕೀಯ ಪರಿಹಾರ ಕಂಡುಕೊಳ್ಳದಿದ್ದರೆ ಪ್ರತಿ ಬಾರಿಯೂ ಇದೇ ತಪ್ಪುಗಳನ್ನು ಮಾಡುತ್ತಿರುತ್ತೇವೆ. ಕಾಶ್ಮೀರದಲ್ಲಿ ಕಾನೂನು, ಸುವ್ಯವಸ್ಥೆಗೆ ಭಂಗ ಉಂಟಾಗುತ್ತಿದ್ದರೆ, ಅನಿಶ್ಚಿತತೆ ಹೀಗೆಯೇ ಮುಂದುವರಿದರೆ ಜನರು ಇನ್ನಷ್ಟು ರೊಚ್ಚಿಗೆದ್ದು ದೂರ ಹೋಗುತ್ತಾರೆ. ಜಮ್ಮು-ಕಾಶ್ಮೀರದ ಇಂದಿನ ಸ್ಥಿತಿಗತಿಗೆ ಕಾರಣವೇನೆಂದು ಅರ್ಥ ಮಾಡಿಕೊಂಡು ಸರಿಯಾದ ಪರಿಹಾರ ಕಂಡುಕೊಳ್ಳಬೇಕು ಎಂದು ಒಮರ್ ಅಬ್ದುಲ್ಲಾ ಹೇಳಿದರು.
''ನಮ್ಮ ಮಾತು ಅರ್ಥವಾಗಬಹುದು ಎಂದು ಭಾವಿಸುತ್ತೇವೆ. ನಾವಿಲ್ಲಿಗೆ ಯಾವ ದೂರನ್ನೂ ಹೊತ್ತು ತಂದಿಲ್ಲ. ನಾವಿಲ್ಲಿಗೆ ಮನವಿ ಮಾಡಿಕೊಳ್ಳಲು ಬಂದಿದ್ದೇವೆ. ಜಮ್ಮು-ಕಾಶ್ಮೀರ ಸಮಸ್ಯೆ ಪರಿಹಾರವಾದರೆ ಅಲ್ಲಿನ ಜನರಿಗೆ ಮಾತ್ರವಲ್ಲ ಇಡೀ ದೇಶಕ್ಕೆ ಅನುಕೂಲವಾಗುತ್ತದೆ ಎಂದರು.
ರಾಜ್ಯದ ಗಲಭೆಪೀಡಿತ ಪ್ರದೇಶದಲ್ಲಿ ಪೆಲ್ಲೆಟ್ ಗನ್ ಬಳಸುವುದಕ್ಕೆ ತಕ್ಷಣ ನಿಷೇಧ ಹೇರಬೇಕೆಂದು ನಿಯೋಗ ಪ್ರಧಾನ ಮಂತ್ರಿಯವರಿಗೆ ಮನವಿ ಸಲ್ಲಿಸಿತು. 
ಕಾಶ್ಮೀರದಲ್ಲಿನ ಸ್ಥಿತಿಗತಿ ಬಗ್ಗೆ ವಿವರಿಸಲು ನಿನ್ನೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದ ಒಂದು ದಿನದ ನಂತರ ನಿಯೋಗ ಪ್ರಧಾನಿಯವರನ್ನು ಭೇಟಿ ಮಾಡಿದೆ.
 ಜುಲೈ 9ರಂದು ಉಗ್ರಗಾಮಿ ಮುಖಂಡ ಬುರ್ಹಾನಿ ವಾನಿ ಹತ್ಯೆಯ ನಂತರ ಪ್ರತ್ಯೇಕತಾವಾದಿಗಳು ಕರೆ ನೀಡಿದ್ದ ಪ್ರತಿಭಟನೆ ಕಣಿವೆ ರಾಜ್ಯದಲ್ಲಿ ಇನ್ನೂ ಕೂಡ ನಿಂತಿಲ್ಲ. ಹಿಂಸಾಚಾರದಲ್ಲಿ ಇದುವರೆಗೆ 68 ಮಂದಿ ಮೃತಪಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com