ರಾಷ್ಟ್ರೀಯತೆ ನಮ್ಮ ಶಕ್ತಿ; ಬಡವರ ಪರ ಕೆಲಸಕ್ಕೆ ಒತ್ತು ನೀಡಿ: ಕಾರ್ಯಕರ್ತರಿಗೆ ಮೋದಿ ಕರೆ

ಜನರಲ್ಲಿ ರಾಷ್ಟ್ರೀಯತೆಯ ಭಾವನೆ ಮೂಡಿಸಲು ಒತ್ತು ನೀಡಬೇಕು ಎಂದು ಪ್ರತಿಪಾದಿಸಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ...
ದೆಹಲಿಯಲ್ಲಿ ನಿನ್ನೆ ಮುಕ್ತಾಯಗೊಂಡ ಕೋರ್ ಕಮಿಟಿ ಸಭೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ
ದೆಹಲಿಯಲ್ಲಿ ನಿನ್ನೆ ಮುಕ್ತಾಯಗೊಂಡ ಕೋರ್ ಕಮಿಟಿ ಸಭೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ
ನವದೆಹಲಿ: ಜನರಲ್ಲಿ ರಾಷ್ಟ್ರೀಯತೆಯ ಭಾವನೆ ಮೂಡಿಸಲು ಒತ್ತು ನೀಡಬೇಕು ಎಂದು ಪ್ರತಿಪಾದಿಸಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ, ದೇಶಕ್ಕಾಗಿ ಉತ್ತಮ ಕೆಲಸ ಮಾಡುತ್ತಿರುವ ಜನರನ್ನು ಬೇರೆಡೆಗೆ ತಿರುಗಿಸಲು ಪ್ರಯತ್ನಿಸುತ್ತಿರುವವರ ಬಗ್ಗೆ ಎಚ್ಚರಿಕೆಯಿಂದಿರಿ ಎಂದು ಪಕ್ಷದ ಕಾರ್ಯಕರ್ತರಿಗೆ ಎಚ್ಚರಿಕೆ ನೀಡಿದರು. ದೇಶದ ಸಾಮಾಜಿಕ ಸಾಮರಸ್ಯ ಹದಗೆಡಲು ಪ್ರಯತ್ನಿಸುತ್ತಿರುವವರ ವಿರುದ್ಧ ಎಲ್ಲರನ್ನೂ ಒಟ್ಟು ತರಲು ತಿರಂಗ ಯಾತ್ರೆಯಂತಹ ಕಾರ್ಯಕ್ರಮಗಳು ಸಹಾಯ ಮಾಡುತ್ತವೆ ಎಂದು ಹೇಳಿದರು.
ಬಿಜೆಪಿಯ ಎಲ್ಲಾ ರಾಜ್ಯ ಮತ್ತು ರಾಷ್ಟ್ರ ಘಟಕಗಳ ಕೋರ್ ಗುಂಪುಗಳ ಒಂದು ದಿನದ ಕಾರ್ಯಾಗಾರವನ್ನುದ್ದೇಶಿಸಿ ನಿನ್ನೆ ದೆಹಲಿಯಲ್ಲಿ ಮಾತನಾಡಿದ ಅವರು, ತಮ್ಮ ಪಕ್ಷ ಮತ್ತು ಸರ್ಕಾರ ಬಡವರ ಉದ್ದಾರಕ್ಕೆ ಹಲವು ಕ್ರಮಗಳನ್ನು ತೆಗೆದುಕೊಂಡಿದೆ ಎಂದರು.
ಮುಂದಿನ ವರ್ಷದಲ್ಲಿ ಹಲವು ರಾಜ್ಯಗಳಲ್ಲಿ ಚುನಾವಣೆ ನಡೆಯಲಿರುವುದರಿಂದ ಮತ್ತು 2019ರ ಲೋಕಸಭಾ ಚುನಾವಣೆ ಮೇಲೆ ಮೋದಿಯವರ ರಾಷ್ಟ್ರೀಯತೆ ಮತ್ತು ಬಡವರಪರ ಯೋಜನೆಗಳು ಎಂಬ ಧ್ಯೇಯವಾಕ್ಯಗಳು ಮಹತ್ವ ಪಡೆದಿವೆ. ಕಾಶ್ಮೀರದಲ್ಲಿನ ಹಿಂಸಾಚಾರ, ಜೆಎನ್ ಯು ವಿವಾದದ ಹಿನ್ನೆಲೆಯಲ್ಲಿ ಪ್ರಧಾನಿಯವರು ಈ ವಿಷಯಗಳ ಬಗ್ಗೆ ನಿನ್ನೆಯ ಭಾಷಣದಲ್ಲಿ ಮಾತನಾಡಿದ್ದಾರೆ ಎನ್ನಬಹುದು. ಪ್ರಧಾನಿಯವರು ಈ ವಿಷಯಗಳನ್ನು ನೇರವಾಗಿ ಪ್ರಸ್ತಾಪಿಸದಿದ್ದರೂ ಕೂಡ ಅವರ ಮಾತಿನಲ್ಲಿ ಇದು ಸ್ಪಷ್ಟವಾಗಿ ಗೋಚರಿಸುತ್ತಿತ್ತು. 
ನಾವು ನಿರಂತರವಾಗಿ ಅಭಿವೃದ್ಧಿಪರ ಕೆಲಸಗಳನ್ನು ಮಾಡುತ್ತೇವೆ. ಆದರೆ ಕೆಲವು ಪಟ್ಟಭದ್ರ ಶಕ್ತಿಗಳು ಅವುಗಳನ್ನು ಸಹಿಸುವುದಿಲ್ಲ. ಅವರು ನಮ್ಮ ಮತ್ತು ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಪ್ರಯತ್ನಿಸುತ್ತಾರೆ. ರಾಷ್ಟ್ರ ನಿರ್ಮಾಣ ನಮ್ಮ ಏಕೈಕ ಗುರಿ ಎಂದು ನಾವು ಸಾಮಾನ್ಯ ಜನತೆಗೆ ಹೇಳಲು ಇಷ್ಟಪಡುತ್ತೇವೆ ಎಂದು ಪ್ರಧಾನಿ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com