ನವದೆಹಲಿ: ಪೂರ್ವ ಭಾರತದ ಹಲವು ರಾಜ್ಯಗಳಲ್ಲಿ ಬುಧವಾರ ಭೂಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ 6.7ರಷ್ಟು ತೀವ್ರತೆ ದಾಖಲಾಗಿದೆ.
ಪಶ್ಚಿಮ ಬಂಗಾಳ, ಅಸ್ಸಾಂ, ಬಿಹಾರ. ನಾಗಾಲ್ಯಾಂಡ್, ಅರುಣಾಚಲ ಪ್ರದೇಶ, ಮಣಿಪುರ ಹಾಗೂ ತ್ರಿಪುರಗಳಲ್ಲಿ ಭೂಮಿ ಕಂಪಿಸಿದ್ದು, ಮೈಯನ್ಮಾರ್ ನಲ್ಲಿ ಭೂಕಂಪನ ಕೇಂದ್ರ ಬಿಂದು ಪತ್ತೆಯಾಗಿದೆ.
ಭೂಕಂಪದಿಂದಾಗಿ ಕೋಲ್ಕತಾದಲ್ಲಿ ಮೆಟ್ರೋ ರೈಲು ಸಂಚಾರ ಸ್ಥಗಿತಗೊಳಿಸಲಾಗಿದ್ದು, ಆತಂಕಗೊಂಡ ಜನತೆ ಮನೆ ಹಾಗೂ ಕಚೇರಿಗಳಿಂದ ಹೊರಬಂದಿದ್ದಾರೆ. ಅಲ್ಲದೆ ಸುಮಾರು 10 ಸೆಕೆಂಡ್ ಗಳ ಕಾಲ ಕಂಪನ ಅನುಭವವಾಯಿತು ಎಂದು ಹೇಳಿಕೊಂಡಿದ್ದಾರೆ.