ಆ.29 ರಂದು ಭಾರತಕ್ಕೆ ಭೇಟಿ ನೀಡಲಿರುವ ಯುಎನ್ 71 ನೇ ಅಧಿವೇಶನದ ಅಧ್ಯಕ್ಷ ಪೀಟರ್ ಥಾಮ್ಸನ್

ವಿಶ್ವಸಂಸ್ಥೆಯ 71 ನೇ ಮಹಾಸಭೆಯ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪೀಟರ್ ಥಾಮ್ಸನ್ ಮುಂದಿನ ವಾರ ಭಾರತಕ್ಕೆ ಭೇಟಿ ನೀಡಲಿದ್ದು ಪ್ರಧಾನಿ ನರೇಂದ್ರ ಮೋದಿ, ಸುಷ್ಮಾ ಸ್ವರಾಜ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ
ಆ.29 ರಂದು ಭಾರತಕ್ಕೆ ಭೇಟಿ ನೀಡಲಿರುವ ಯುಎನ್  71 ನೇ ಅಧಿವೇಶನದ ಅಧ್ಯಕ್ಷ ಪೀಟರ್ ಥಾಮ್ಸನ್
ಆ.29 ರಂದು ಭಾರತಕ್ಕೆ ಭೇಟಿ ನೀಡಲಿರುವ ಯುಎನ್ 71 ನೇ ಅಧಿವೇಶನದ ಅಧ್ಯಕ್ಷ ಪೀಟರ್ ಥಾಮ್ಸನ್

ಯುನೈಟೆಡ್ ನೇಷನ್ಸ್: ವಿಶ್ವಸಂಸ್ಥೆಯ 71 ನೇ ಮಹಾಸಭೆಯ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪೀಟರ್ ಥಾಮ್ಸನ್ ಮುಂದಿನ ವಾರ ಭಾರತಕ್ಕೆ ಭೇಟಿ ನೀಡಲಿದ್ದು ಪ್ರಧಾನಿ ನರೇಂದ್ರ ಮೋದಿ, ಸುಷ್ಮಾ ಸ್ವರಾಜ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ.

ವಿಶ್ವಸಂಸ್ಥೆಯಲ್ಲಿ ಫಿಜಿ ದೇಶದ ಪ್ರತಿನಿಧಿಯಾಗಿರುವ ಪೀಟರ್ ಥಾಮ್ಸನ್, ವಿಶ್ವಸಂಸ್ಥೆಯ ಮುಂಬರುವ 71 ನೇ ಮಹಾಸಭೆಯ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದು, ಚೀನಾಗೆ ಭೇಟಿ ನೀಡಿದ ಬಳಿಕ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಆಗಸ್ಟ್.29 ರಂದು ಭಾರತಕ್ಕೆ ಆಗಮಿಸಲಿರುವ ಪೀಟರ್ ಥಾಮ್ಸನ್, ವಿದೇಶಾಂಗ ಸಚಿವೆ ಸುಶ್ಮಾ ಸ್ವರಾಜ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಸ್ಥಿರ ಅಭಿವೃದ್ಧಿಗಾಗಿ 2030 ರ ಅಜೇಂಡಾ ಬಗ್ಗೆ ವಿಶ್ವ ಸಂಸ್ಥೆ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಚರ್ಚಿಸಲಿದ್ದಾರೆ.

ವಿಶ್ವಸಂಸ್ಥೆಯ 71 ನೇ ಮಹಾಸಭೆಯ ಅಧ್ಯಕ್ಷನಾಗಿ ಆಯ್ಕೆಯಾಗಿದ್ದು ಏಷ್ಯಾದ ಎರಡು ಪ್ರಮುಖ ರಾಷ್ಟ್ರಗಳಾದ  ಭಾರತ- ಚೀನಾಗಳಿಗೆ ಭೇಟಿ ನೀಡಲು ಕಾತುರದಿಂದ ಇದ್ದೇನೆ ಎಂದು ಹೇಳಿದ್ದಾರೆ. ಕಳೆದ ಎರಡು ಮಹಾಸಭೆಗಳಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ ವಿಶ್ವಸಂಸ್ಥೆಯ ಮುಂಬರುವ ಮಹಾಸಭೆಯಲ್ಲಿ ಭಾಗವಹಿಸುತ್ತಿಲ್ಲ, ಪ್ರಧಾನಿ ನರೇಂದ್ರ ಮೋದಿ ಪರವಾಗಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಭಾಗವಹಿಸಲಿದ್ದಾರೆ. ವಿಶ್ವಸಂಸ್ಥೆಯ ಮುಂಬರುವ ಅಧಿವೇಶನ ಸಾಕಷ್ಟು ಸುಧಾರಣೆಗಳ ದೃಷ್ಟಿಯಿಂದ ಮಹತ್ವ ಪಡೆದುಕೊಂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com