
ನವದೆಹಲಿ: ನವದೆಹಲಿಯಲ್ಲಿ ನಡೆಯುತ್ತಿರುವ ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಉದ್ಘಾಟಿಸಿದ್ದಾರೆ.
ಒಳ್ಳೆಯ ಆಡಳಿತ ಹಾಗೂ ಬಡವರ ಅಭಿವೃದ್ಧಿ ವಿಷಯಗಳ ಚರ್ಚೆ ಸಭೆಯ ಪ್ರಧಾನ ಅಂಶವಾಗಿದ್ದು, ಬಿಜೆಪಿ ಆಡಳಿತ ರಾಜ್ಯಗಳ ಮುಖ್ಯಮಂತ್ರಿಗಳು ಒಳ್ಳೆಯ ಆಡಳಿತ ಹಾಗೂ ಬಡವರ ಅಭಿವೃದ್ಧಿಗಾಗಿ ತಮ್ಮ ರಾಜ್ಯಗಳ ಯೋಜನೆಗಳು ಹಾಗೂ ಅದನ್ನು ಕಾರ್ಯರೂಪಕ್ಕೆ ತರುವುದರ ಬಗ್ಗೆ ಮಾತನಾಡಲಿದ್ದಾರೆ.
ಸಂಜೆ ವೇಳೆಗೆ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಸಿಎಂ ಗಳ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಇತ್ತೀಚೆಗಷ್ಟೇ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿರುವ ರಾಜ್ಯಗಳಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಜನರಿಗೆ ಮಾಹಿತಿ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳ ಸಿಎಂಗಳ ಸಭೆಯನ್ನು ಆಯೋಜಿಸಲಾಗಿದೆ.
Advertisement