ಶೀಘ್ರದಲ್ಲೇ ಕಾಶ್ಮೀರದಲ್ಲಿ ಮತ್ತೆ ಶಾಂತಿ ಮರುಕಳಿಸುವ ವಿಶ್ವಾಸವಿದೆ: ಅಬ್ದುಲ್ ಬಸಿತ್

ಕಾಶ್ಮೀರ ವಿವಾದ ಕುರಿತಂತೆ ಮಾತುಕತೆ ನಡೆಸಲು ಭಾರತಕ್ಕೆ ಮನವಿಯನ್ನು ಕಳುಹಿಸಲಾಗಿತ್ತು. ಆದರೆ, ನಮ್ಮ ಆಹ್ವಾನವನ್ನು ಭಾರತ ತಿರಸ್ಕರಿಸಿದೆ. ಸಮಸ್ಯೆ ಕುರಿತಂತೆ ಎರಡೂ ರಾಷ್ಟ್ರಗಳು ಮಾತುಕತೆ ನಡೆಸುತ್ತವೆ ಎಂಬ ನಂಬಿಕೆಯಿದೆ...
ಭಾರತದಲ್ಲಿನ ಪಾಕಿಸ್ತಾನದ ಹೈಕಮಿಷನರ್ ಅಬ್ದುಲ್ ಬಸಿತ್
ಭಾರತದಲ್ಲಿನ ಪಾಕಿಸ್ತಾನದ ಹೈಕಮಿಷನರ್ ಅಬ್ದುಲ್ ಬಸಿತ್
Updated on: 

ನವದೆಹಲಿ: ಕಾಶ್ಮೀರ ವಿವಾದ ಕುರಿತಂತೆ ಮಾತುಕತೆ ನಡೆಸಲು ಭಾರತಕ್ಕೆ ಮನವಿಯನ್ನು ಕಳುಹಿಸಲಾಗಿತ್ತು. ಆದರೆ, ನಮ್ಮ ಆಹ್ವಾನವನ್ನು ಭಾರತ ತಿರಸ್ಕರಿಸಿದೆ. ಸಮಸ್ಯೆ ಕುರಿತಂತೆ ಎರಡೂ ರಾಷ್ಟ್ರಗಳು ಮಾತುಕತೆ ನಡೆಸುತ್ತವೆ ಎಂಬ ನಂಬಿಕೆಯಿದೆ. ಶೀಘ್ರದಲ್ಲೇ ಕಾಶ್ಮೀರದಲ್ಲಿ ಮತ್ತೆ ಶಾಂತಿ ಮರುಕಳಿಸುವ ವಿಶ್ವಾಸವಿದೆ ಎಂದು ಭಾರತದಲ್ಲಿನ ಪಾಕಿಸ್ತಾನದ ಹೈಕಮಿಷನರ್ ಅಬ್ದುಲ್ ಬಸಿತ್ ಅವರು ಶನಿವಾರ ಹೇಳಿದ್ದಾರೆ.

ಕಾಶ್ಮೀರ ಹಿಂಸಾಚಾರ ಕುರಿತಂತೆ ಇಂದು ಪ್ರತಿಕ್ರಿಯೆ ನೀಡಿರುವ ಅವರು, ಶೀಘ್ರದಲ್ಲಿಯೇ ಕಾಶ್ಮೀರದಲ್ಲಿ ಶಾಂತಿ ಮರುಕಳಿಸುವ ವಿಶ್ವಾಸ ನಮಗಿದೆ. ಕಾಶ್ಮೀರ ಸಮಸ್ಯೆ ಕುರಿತಂತೆ ಪರಿಹಾರ ಕಂಡುಕೊಳ್ಳುವ ಸಲುವಾಗಿ ಮಾತುಕತೆ ನಡೆಸಲು ಪಾಕಿಸ್ತಾನ ಸರ್ಕಾರ ಭಾರತಕ್ಕೆ ಆಹ್ವಾನವನ್ನು ನೀಡಿತ್ತು. ಆದರೆ, ನಮ್ಮ ಆಹ್ವಾನವನ್ನು ಭಾರತ ತಿರಸ್ಕರಿಸುವುದು ಎಲ್ಲರಿಗೂ ತಿಳಿದಿರುವ ವಿಚಾರ. ಸಮಸ್ಯೆ ಕುರಿತಂತೆ ಎರಡೂ ರಾಷ್ಟ್ರಗಳು ಮಾತುಕತೆ ನಡೆಸುತ್ತವೆ ಎಂಬ ವಿಶ್ವಾಸವಿದೆ. ವಿವಾದ ಕುರಿತಂತೆ ಭಾರತದೊಂದಿಗೆ ಮಾತುಕತೆ ನಡೆಸುವ ನಮ್ಮ ಪ್ರಯತ್ನ ಮುಂದುವರೆಯಲಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ಪಾಕಿಸ್ತಾನದ ವಿರುದ್ಧ ಮೆಹಬೂಬಾ ಮುಫ್ತಿಯವರು ನಡೆಸಿದ್ದ ವಾಗ್ದಾಳಿ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು,  ಮೆಹಬೂಬಾ ಅವರು ಅವರ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ನಾನು ಯಾವುದೇ ರೀತಿಯ ಪ್ರತಿಕ್ರಿಯೆ ನೀಡಲು ಇಚ್ಛಿಸುವುದಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com