ಬುಲಂದ್ ಶೆಹರ್ ಅತ್ಯಾಚಾರ ಕುರಿತ ಅಜಂಖಾನ್ ಹೇಳಿಕೆ ಆಕ್ಷೇಪಾರ್ಹವಾದದ್ದು: ಸುಪ್ರೀಂ

ಬುಲಂದ್ ಶೆಹರ್ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ ನಾಯಕ ಅಜಂಖಾನ್ ಅವರು ನೀಡಿದ್ದ ಹೇಳಿಕೆ ಅಕ್ಷೇಪಾರ್ಹ ಹಾಗೂ ಅಸಂವೇದಿ...
ಉತ್ತರ ಪ್ರದೇಶ ಸಚಿವ ಅಜಂಖಾನ್
ಉತ್ತರ ಪ್ರದೇಶ ಸಚಿವ ಅಜಂಖಾನ್

ನವದೆಹಲಿ: ಬುಲಂದ್ ಶೆಹರ್ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧಿಸಿದಂತೆ ಉತ್ತರ ಪ್ರದೇಶ ಸಚಿವ ಅಜಂಖಾನ್ ಅವರು ನೀಡಿದ್ದ ಹೇಳಿಕೆ ಅಕ್ಷೇಪಾರ್ಹ ಹಾಗೂ ಅಸಂವೇದಿ ಹೇಳಿಕೆಯಾಗಿದೆ ಎಂದು ಸುಪ್ರೀಂಕೋರ್ಟ್ ಸೋಮವಾರ ಹೇಳಿದೆ.

ಕೆಲ ದಿನಗಳ ಹಿಂದಷ್ಟೇ ಬುಲಂದ್ ಶೆಹರ್ ನಲ್ಲಿ ತಾಯಿ ಹಾಗೂ ಮಗಳ ಮೇಲೆ ಸಾಮೂಹಿಕ ಅತ್ಯಾಚಾರವೊಂದು ನಡೆದಿತ್ತು. ಪ್ರಕರಣ ಕುರಿತಂತೆ ಬೇಜವಾಬ್ದಾರಿಯುತವಾಗಿ ಮಾತನಾಡಿದ್ದ ಅಜಂಖಾನ್ ಅವರು, ಚುನಾವಣೆ ಹತ್ತಿರವಿದ್ದು, ಸಾಮೂಹಿಕ ಅತ್ಯಾಚಾರ ಪ್ರಕರಣವೊಂದು ವಿರೋಧ ಪಕ್ಷಗಳ ರಾಜಕೀಯ ಪಿತೂರಿಯಾಗಿದೆ ಎಂದು ಹೇಳಿದ್ದರು. ಈ ಹೇಳಿಕೆಗೆ ಹಲವು ರಾಜಕೀಯ ನಾಯಕರು ವಿರೋಧ ವ್ಯಕ್ತಪಡಿಸಿದ್ದರು.

ಅಜಂಖಾನ್ ಅವರ ಈ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಅತ್ಯಾಚಾರ ಸಂತ್ರಸ್ತರ ಕುಟುಂಬಸ್ಥರು ಸುಪ್ರೀಂ ಮೆಟ್ಟಿಲೇರಿದ್ದರು.

ಇದರಂತೆ ಇಂದು ಅರ್ಜಿಯನ್ನು ವಿಚಾರಣೆ ನಡೆಸಿರುವ ಸುಪ್ರೀಂ, ಸಾಮೂಹಿಕ ಅತ್ಯಾಚಾರ ಕುರಿತಂತೆ ಅಜಂಖಾನ್ ಅವರು ನೀಡಿರುವ ಹೇಳಿಕೆ ಆಕ್ಷೇಪಾರ್ಹವಾದದ್ದು ಮತ್ತು ಅಸಂವೇದಿಯುತ ಹೇಳಿಕೆಯಾಗಿದೆ ಎಂದು ಹೇಳಿದೆ.

ಅಧಿಕಾರದಲ್ಲಿರುವ ನಾಯಕರು ಈ ರೀತಿಯ ಬೇಜವಾಬ್ದಾರಿಯುತ ಹೇಳಿಕೆಯನ್ನು ನೀಡುವುದಾದರೂ ಹೇಗೆ? ಈ ರೀತಿಯ ಹೇಳಿಕೆಗಳು ನ್ಯಾಯಾಂಗ ಸಂಸ್ಥೆಯ ಮೇಲೆ ಜನರಿಗಿರುವ ನಂಬಿಕೆಯನ್ನು ಕುಗ್ಗಿಸುತ್ತದೆ. ಈ ರೀತಿಯ ಹೇಳಿಕೆಗಳನ್ನು ಅಭಿವ್ಯಕ್ತಿ ಸ್ವಾತಂತ್ರ್ಯವೆಂದು ಕರೆಯಲು ಹೇಗೆ ಸಾಧ್ಯ? ಎಂದು ಪ್ರಶ್ನಿಸಿದೆ.

ಅಲ್ಲದೆ, ವಿವಾದಾತ್ಮಕವಾಗಿ ಹೇಳಿಕೆ ನೀಡುತ್ತಿರುವ ಈ ರೀತಿಯ ನಾಯಕರ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನೇಕೆ ದಾಖಲಿಸುತ್ತಿಲ್ಲ ಎಂದು ಪ್ರಶ್ನಿಸಿ ಉತ್ತರ ಪ್ರದೇಶ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ, ನೋಟಿಸ್ ನಲ್ಲಿ  ಶೀಘ್ರಗತಿಯಲ್ಲಿ ಸ್ಪಷ್ಟನೆ ನೀಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚಿನೆ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com