ಕೋಲ್ಕತಾ: ಪಶ್ಚಿಮ ಬಂಗಾಳವನ್ನು ಮರುನಾಮಕರಣ ಮಾಡುವ ಪ್ರಸ್ತಾವನೆಯನ್ನು ಪಶ್ಚಿಮ ಬಂಗಾಳ ವಿಧಾನಸಭೆ ಅಂಗೀಕರಿಸಿದೆ.
ಎಎನ್ಐ ಸುದ್ದಿ ಸಂಸ್ಥೆಯ ಪ್ರಕಾರ, ಪಶ್ಚಿಮ ಬಂಗಾಳವನ್ನು ಬೆಂಗಾಲಿಯಲ್ಲಿ ಬಾಂಗ್ಲಾ ಎಂದು, ಇಂಗ್ಲಿಷ್ ನಲ್ಲಿ ಬೆಂಗಾಲ್ ಎಂದು ಹಾಗೂ ಹಿಂದಿಯಲ್ಲಿ ಬಂಗಾಲ್ ಎಂದು ಮರು ನಾಮಕರಣ ಮಾಡಲಾಗಿದೆ.
ಈ ಸಂಬಂಧ ಆಗಸ್ಟ್ 26ರಂದು ನಡೆದ ವಿಶೇಷ ಅಧಿವೇಶನದಲ್ಲಿ ಪ್ರಸ್ತಾವನೆಯನ್ನು ಅಂಗೀಕರಿಸಲಾಗಿದೆ. ಅಲ್ಲದೆ ಈ ಪ್ರಸ್ತಾವನೆಯನ್ನು ಸಂಸತ್ತಿನ ಅಂಗೀಕಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗುವುದು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಿಳಿಸಿದ್ದಾರೆ.
ಇಂಗ್ಲಿಷ್‍ನಲ್ಲಿ ಬಂಗಾಳ ಎಂದು ಕರೆಯಲಾಗುತ್ತದೆ. ರಾಜ್ಯದ ಹಿತಾಸಕ್ತಿಯನ್ನು ಕಾಪಾಡುವ ಸಲುವಾಗಿ ಮತ್ತು ಪರಂಪರೆಯನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಈ ಪ್ರಸ್ತಾವನೆಯನ್ನು ಮುಂದಿಡಲಾಗಿದೆ. ಈ ವಿಷಯದ ಬಗ್ಗೆ ಚರ್ಚಿಸಲು ಆಗಸ್ಟ್ 26ರಂದು ವಿಧಾನಮಂಡಲದ ವಿಶೇಷ ಅಧಿವೇಶನ ಕರೆಯಲಾಗಿತ್ತು.
2011ರಲ್ಲಿ ಅಧಿಕಾರಕ್ಕೆ ಬಂದ ಬಳಿಕ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಈ ವಿಶಿಷ್ಟ ಯೋಚನೆ ಮಾಡಿ, ಮರುನಾಮಕರಣದ ವಿಷಯ ಕೈಗೆತ್ತಿಕೊಂಡಿದ್ದರು. ವಿಧಾನಸಭೆಯಲ್ಲಿ ಈ ಹೆಸರು ಬದಲಾವಣೆ ಪ್ರಸ್ತಾವನೆ ಆಂಗೀಕಾರವಾಗಿದ್ದು, ಈಗ ಸಂಸತ್ತಿನಿಂದ ಆಂಗೀಕಾರ ಪಡೆಯಬೇಕಾಗಿದೆ.
ಬಂಗಾಳಿ ಭಾಷೆಯಲ್ಲಿ ಈ ರಾಜ್ಯವನ್ನು ಈಗ ಪಶ್ಚಿಮ ಬಂಗಾಳ ಎಂದು ಕರೆಯಲಾಗುತ್ತದೆ. ಇದನ್ನು ಇಂಗ್ಲಿಷ್‍ನಲ್ಲಿ ವೆಸ್ಟ್ ಬೆಂಗಾಲ್ ಎಂದು ಕರೆಯುತ್ತಾರೆ.