ಸೆಪ್ಟಂಬರ್ 2 ರಂದು ದೇಶಾದ್ಯಂತ ಮುಷ್ಕರ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕೇಂದ್ರ ಸರ್ಕಾರದ ವಿರುದ್ಧ ಸೆಪ್ಟಂಬರ್ 2 ರಂದು ಅಖಿಲ ಭಾರತ ಮುಷ್ಕರಕ್ಕೆ ಕರೆ ನೀಡಲಾಗಿದೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕೇಂದ್ರ ಸರ್ಕಾರದ ವಿರುದ್ಧ ಸೆಪ್ಟಂಬರ್ 2 ರಂದು ಅಖಿಲ ಭಾರತ ಮುಷ್ಕರಕ್ಕೆ ಕರೆ ನೀಡಲಾಗಿದೆ.

17 ಬೇಡಿಕೆಗಳನ್ನು ಕೂಡಲೇ ಈಡೇರಿಸುವಂತೆ ಆಗ್ರಹಿಸಿ, ವಿವಿಧ  ಕಾರ್ಮಿಕ ಒಕ್ಕೂಟಗಳಾದ ಐಎನ್ ಟಿಯುಸಿ, ಎಚ್ ಎಂ ಎಸ್, ಸಿಐಟಿಯು, ಎಐಟಿಯುಸಿ, ಟಿಯುಸಿಸಿ ಸೇರಿದಂತೆ ಅನೇಕ ಕಾರ್ಮಿಕ ಸಂಘಟನೆಗಳು ಮುಷ್ಕರಕ್ಕೆ ಕರೆ ನೀಡಿವೆ.

ಕೇಂದ್ರ ಸರ್ಕಾರದ ಮುಂದೆ ಬೇಡಿಕೆ ಇಟ್ಟಿರೋ ಕಾರ್ಮಿಕ ಒಕ್ಕೂಟಗಳ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ಒಂದು ದಿನದ ಮುಷ್ಕರಕ್ಕೆ ಕರೆ ನೀಡಿವೆ. ಬಹುತೇಕ ಕಾರ್ಮಿಕ ಒಕ್ಕೂಟಗಳು ಮುಷ್ಕರದಲ್ಲಿ ಪಾಲ್ಗೊಳ್ಳಲಿವೆ. ಹೀಗಾಗಿ, ಕೆಎಸ್ ಆರ್ ಟಿಸಿ, ಬಿಎಂಟಿಸಿ ಬಸ್ಸುಗಳು ಓಡಾಡುವುದೂ ಡೌಟ್. ಆಟೋಗಳಂತೂ ಇಲ್ಲವೇ ಇಲ್ಲ.

ಆರ್ ಎಸ್ ಎಸ್ ನ ಭಾರತೀಯ ಮಜ್ದೂರ್ ಸಂಘ ಮುಷ್ಕರದಿಂದ ದೂರ ಉಳಿದಿದೆ. ವಿದ್ಯುತ್, ಸಾರಿಗೆ, ಗಣಿಗಾರಿಕೆ, ಬ್ಯಾಂಕ್, ಟೆಲಿಕಾಂ, ಸಂಸ್ಥೆಯ ಉದ್ಯೋಗಿಗಳು ಮುಷ್ಕರದಲ್ಲಿ ಪಾಲ್ಗೋಳ್ಳಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com