ಆರೋಪಿ ಕುನ್ವರ್ ಲಾಲ್ ಎರಡು ವರ್ಷಗಳ ಹಿಂದೆ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಜೈಲು ಪಾಲಾಗಿದ್ದ. ಆದರೆ ಕಳೆದ ತಿಂಗಳಷ್ಟೇ ಆರೋಪಿಗೆ ಸ್ಥಳೀಯ ನ್ಯಾಯಾಲಯ ಜಾಮೀನು ನೀಡಿತ್ತು. ಜಾಮೀನಿನ ಮೇಲೆ ಬಿಡುಗಡೆಯಾದ ನಂತರ ತನ್ನ ವಿರುದ್ಧ ಆರೋಪ ಮಾಡಿದ್ದ ಮಹಿಳೆಯ ಬೆರಳು ಕಟ್ ಮಾಡಿದ ಕನ್ವರ್ ಲಾಲ್ ನನ್ನು ನಿನ್ನೆ ರಾತ್ರಿ ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.