ಭಯೋತ್ಪಾದನೆ ನಿಗ್ರಹಕ್ಕೆ ಮತ್ತಷ್ಟು ಕಠಿಣ ಕ್ರಮ ಅಗತ್ಯ: ಅಮೆರಿಕಾಗೆ ಭಾರತದ ಸಲಹೆ

ನವದೆಹಲಿಯಲ್ಲಿ 2 ದಿನಗಳು ನಡೆದ ಭಾರತ- ಅಮೆರಿಕ ಕಾರ್ಯತಂತ್ರ ಹಾಗೂ ವಾಣಿಜ್ಯ ಮಾತುಕತೆ(ಎಸ್& ಸಿಡಿ) ಸಭೆ ಮುಕ್ತಾಯಗೊಂಡಿದೆ.
ಅಮೆರಿಕ ಕಾರ್ಯದರ್ಶಿ ಜಾನ್ ಕೆರ್ರಿ, ಸುಷ್ಮಾ ಸ್ವರಾಜ್
ಅಮೆರಿಕ ಕಾರ್ಯದರ್ಶಿ ಜಾನ್ ಕೆರ್ರಿ, ಸುಷ್ಮಾ ಸ್ವರಾಜ್

ನವದೆಹಲಿ: ನವದೆಹಲಿಯಲ್ಲಿ 2 ದಿನಗಳು ನಡೆದ ಭಾರತ- ಅಮೆರಿಕ ಕಾರ್ಯತಂತ್ರ ಹಾಗೂ ವಾಣಿಜ್ಯ ಮಾತುಕತೆ(ಎಸ್& ಸಿಡಿ) ಸಭೆ ಮುಕ್ತಾಯಗೊಂಡಿದೆ. ಸಭೆಯ ನೇತೃತ್ವ ವಹಿಸಿದ್ದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್  ಭಯೋತ್ಪಾದನೆ ವಿರುದ್ಧ ಮತ್ತಷ್ಟು ಪರಿಣಾಮಕಾರಿ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ಅಮೆರಿಕ ಕಾರ್ಯದರ್ಶಿ ಜಾನ್ ಕೆರ್ರಿಗೆ ತಿಳಿಸಿದ್ದಾರೆ.

ಎರಡು ದಿನಗಳ ಸಭೆಯಲ್ಲಿ ಭಾರತ ಹಾಗೂ ಅಮೆರಿಕ ನಡುವೆ ಇಂಧನ, ವಾಣಿಜ್ಯ, ವ್ಯಾಪಾರಕ್ಕೆ ಸಂಬಂಧಿಸಿದ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆದಿದ್ದು, ಭಯೋತ್ಪಾದನೆ ನಿಗ್ರಹ ಮಾತುಕತೆಯ ಪ್ರಮುಖ ಅಂಶವಾಗಿತ್ತು. ಸಭೆಯ ಬಳಿಕ ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸುಷ್ಮಾ ಸ್ವರಾಜ್ ಭಯೋತ್ಪಾದನೆ ವಿರುದ್ಧ ಮತ್ತಷ್ಟು ಪರಿಣಾಮಕಾರಿ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ಹೇಳಿದ್ದಾರೆ.

ಪಾಕಿಸ್ತಾನ ನಡೆಸುತ್ತಿರುವ ಭಯೋತ್ಪಾದನೆ ಬಗ್ಗೆ ಅಮೆರಿಕಾಗೆ ವಿವರಣೆ ನೀಡಲಾಗಿದೆ ಎಂದು ಸುಷ್ಮಾ ಸ್ವರಾಜ್ ತಿಳಿಸಿದ್ದು, ಪಾಕಿಸ್ತಾನದ ಮೇಲೆ ವಾಗ್ದಾಳಿ ನಡೆಸಿದ್ದಾರೆ.  ಪಾಕಿಸ್ತಾನ ಭಯೋತ್ಪಾದನೆಯನ್ನು ಹತ್ತಿಕ್ಕಬೇಕು, ಪಠಾಣ್ ಕೋಟ್ ದಾಳಿ ಪ್ರಕರಣದ ಮಾಸ್ಟರ್ ಮೈಂಡ್ ಆಗಿರುವ ಹಫೀಜ್ ಸಯೀದ್, ದಾವೂದ್ ಇಬ್ರಾಹಿಂ ವಿರುದ್ಧ ಪಾಕಿಸ್ತಾನ ಕ್ರಮ ಕೈಗೊಳ್ಳಿ ಎಂದು ಪಾಕಿಸ್ತಾನಕ್ಕೆ ಸುಷ್ಮಾ ಸ್ವರಾಜ್ ಒತ್ತಾಯಿಸಿದ್ದಾರೆ.

ನಂತರ ಮಾತನಾಡಿದ ಜಾನ್ ಕೆರ್ರಿ, ಉಭಯ ರಾಷ್ಟ್ರಗಳು ರಕ್ಷಣಾ ಕ್ಷೇತ್ರ, ಸೈಬರ್ ಭದ್ರತೆ ಇಂಧನ ಕ್ಷೇತ್ರಗಳಲ್ಲಿ ಸಹಕಾರವನ್ನು ಮತ್ತಷ್ಟು ವೃದ್ಧಿಗೊಳಿಸಿದೆ. ಜಾಗತಿಕ ಮಟ್ಟದಲ್ಲಿ ಎದುರಾಗುವ ಹೊಸ ಸೈಬರ್ ಸವಾಲುಗಳಿಗೆ  ಪರಿಹಾರ ಕಂಡುಕೊಳ್ಳಲು ಚೌಕಟ್ಟು ರೂಪಿಸುವ ನಿಟ್ಟಿನಲ್ಲಿ ಭಾರತದೊಂದಿಗೆ ಕೆಲಸ ಮಾಡಲು ಅಮೆರಿಕ ಉತ್ಸುಕವಾಗಿದೆ ಎಂದು ಜಾನ್ ಕೆರ್ರಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com